ನಿತ್ಯ ಕೇವಲ 2 ಲವಂಗ ತಿನ್ನುವುದರಿಂದ ಆರೋಗ್ಯಕ್ಕಿದೆ ಇಷ್ಟೆಲ್ಲಾ ಲಾಭ
ಭಾರತೀಯ ಅಡುಗೆ ಮನೆಗಳಲ್ಲಿ ಬಳಸುವ ಪ್ರಮುಖ ಮಸಾಲೆ ಪದಾರ್ಥಗಳಲ್ಲಿ ಲವಂಗವೂ ಒಂದು. ಇದು ಆಹಾರದ ರುಚಿಯನ್ನು ಹೆಚ್ಚಿಸುವುದಷ್ಟೇ ಅಲ್ಲ, ಆರೋಗ್ಯವನ್ನೂ ವೃದ್ಧಿಸುತ್ತದೆ. ಪ್ರತಿದಿನ ಕೇವಲ ಎರಡೇ ಎರಡು ಲವಂಗವನ್ನು ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು ಎಂದು ತಿಳಿಯೋಣ...
ಲವಂಗದಲ್ಲಿ ವಿಟಮಿನ್-ಬಿ1, ವಿಟಮಿನ್-ಸಿ ಮತ್ತು ಬೀಟಾ ಕ್ಯಾರೋಟಿನ್, ವಿಟಮಿನ್-ಕೆ, ಪ್ರೋಟೀನ್, ಕಾರ್ಬೋಹೈಡ್ರೇಟ್‌ಗಳಂತಹ ಪೋಷಕಾಂಶಗಳು ಹೇರಳವಾಗಿ ಕಂಡು ಬರುತ್ತದೆ. ಇದು ನಿಮ್ಮ ದೈಹಿಕ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ.
ಲವಂಗವು ಜೀರ್ಣಕಾರಿ ಕಿಣ್ವಗಳ ಸ್ರವಿಸುವಿಕೆಯನ್ನು ಹೆಚ್ಚಿಸುತ್ತದೆ. ನಿತ್ಯ 2 ಲವಂಗ ತಿನ್ನುವುದರಿಂದ ಜೀರ್ಣಕಾರಿ ಸಂಬಂಧಿತ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.
ಲವಂಗದಲ್ಲಿ ಫೈಬರ್ ಉತ್ತಮ ಪ್ರಮಾಣದಲ್ಲಿ ಕಂಡು ಬರುತ್ತದೆ. ಶೀತ-ಕೆಮ್ಮು ಸಂದರ್ಭದಲ್ಲಿ ಲವಂಗವನ್ನು ಸೇವಿಸುವುದು ಪ್ರಯೋಜನಕಾರಿ ಆಗಿದೆ.
ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಮ್, ರಂಜಕ, ಪೊಟ್ಯಾಸಿಯಮ್, ಸೋಡಿಯಂ ಮತ್ತು ಸತು ಉತ್ತಮ ಪ್ರಮಾಣದಲ್ಲಿ ಕಂಡು ಬರುವ ಲವಂಗವನ್ನು ನಿಯಮಿತವಾಗಿ ಸೇವಿಸುತ್ತಾ ಬಂದರೆ ಇದು ಪುರುಷರಲ್ಲಿ ಲೈಂಗಿಕ ಸಂಬಂಧಿತ ಸಮಸ್ಯೆಗಳಿಂದ ಪರಿಹಾರವನ್ನು ನೀಡಬಲ್ಲದು.
ಪ್ರತಿದಿನ ಮಲಗುವ ಮುನ್ನ ಉಗುರುಬೆಚ್ಚಗಿನ ನೀರಿನೊಂದಿಗೆ ಲವಂಗ ಸೇವಿಸಿದರೆ ಹಲವಾರು ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.