Health benefits of Mango : ಈ ಎಲ್ಲಾ ರೋಗಗಳ ವಿರುದ್ಧ ಹೋರಾಡುವ ಶಕ್ತಿಯಿದೆ ಮಾವಿಗೆ
ಮಾವಿನಕಾಯಿಯಲ್ಲಿ ಹಲವು ವಿಧಗಳಿವೆ. ಮಾವಿನಹಣ್ಣು ವಿಟಮಿನ್ ಗಳು, ಖನಿಜಗಳು ಮತ್ತು ಆಂಟಿ-ಆಕ್ಸಿಡೆಂಟ್ ಗುಣಗಳನ್ನು ಹೊಂದಿರುತ್ತದೆ. ಇದರಲ್ಲಿರುವ ವಿಟಮಿನ್ ಕೆ ರಕ್ತ ಹೆಪ್ಪುಗಟ್ಟುವಲ್ಲಿ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಕಬ್ಬಿಣದ ಅಂಶವು ರಕ್ತಹೀನತೆಯನ್ನು ತಡೆಯುತ್ತದೆ. ನಮ್ಮ ಎಲುಬುಗಳನ್ನು ಬಲಿಷ್ಟಗೊಳಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ.
ವೇಗವಾಗಿ ಹೆಚ್ಚುತ್ತಿರುವ ತೂಕವನ್ನು ನಿಯಂತ್ರಿಸಲು ಕೂಡಾ ಮಾವಿನಹಣ್ಣು ಪ್ರಯೋಜನಕಾರಿಯಾಗಿದೆ. ಅಧ್ಯಯನದ ಪ್ರಕಾರ, ಮಾವಿನಲ್ಲಿರುವ ಫೈಟೊಕೆಮಿಕಲ್ಸ್ ದೇಹದಲ್ಲಿನ ಫ್ಯಾಟ್ ಸೆಲ್ ಗಳನ್ನ ಕಡಿಮೆ ಮಾಡುತ್ತದೆ.
ಕರೋನಾ ಕಾಲದಲ್ಲಿ ರೋಗನಿರೋಧಕ ಶಕ್ತಿಗಾಗಿ ವಿಟಮಿನ್ ಸಿ ಹೊಂದಿರುವ ಹಣ್ಣುಗಳನ್ನು ಹೆಚ್ಚಾಗಿ ಸೇವಿಸಲು ಸೂಚಿಸಲಾಗುತ್ತದೆ. ಮಾವಿನಹಣ್ಣಿನಲ್ಲಿ ವಿಟಮಿನ್ ಸಿ ಕೂಡ ಸಮೃದ್ಧವಾಗಿದೆ. ಇದು ಹೆಲ್ದಿ ಕೊಲೋಜನ್ ಅನ್ನು ಹೆಚ್ಚಿಸುತ್ತದೆ. ಇದಲ್ಲದೆ, ಮಾವು ದೇಹದ ಯಾವುದೇ ರೀತಿಯ ಗಾಯಗಳನ್ನು ವೇಗವಾಗಿ ಗುಣಪಡಿಸಲು ಸಹಾಯ ಮಾಡುತ್ತದೆ.
ಮಾವಿನಹಣ್ಣಿನಲ್ಲಿ ವಿಟಮಿನ್ ಎ ಕೂಡಾ ಸಮೃದ್ಧವಾಗಿರುತ್ತದೆ. ದೈನಂದಿನ ಅಗತ್ಯತೆಯ ವಿಟಮಿನ್ ಎ ಯ ಸುಮಾರು 25 ಪ್ರತಿಶತವನ್ನು ಮಾವಿನಹಣ್ಣು ಪೂರೈಸುತ್ತದೆ. ಇದರಲ್ಲಿ ವಿಟಮಿನ್ ಎ ಇರುವುದರಿಂದ ಕಣ್ಣಿನ ಆರೋಗ್ಯಕ್ಕೂ ಪ್ರಯೋಕನಕಾರಿಯಾಗಿದೆ.
.ಮಾವು ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮಗೊಳಿಸುತ್ತದೆ. ಮಾವಿನಕಾಯಿಯಲ್ಲಿರುವ ಫೈಬರ್ ಮಲಬದ್ಧತೆಯ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಮಾವಿನ ಹಣ್ಣಿನಂತೆ ಮಾವಿನ ಸಿಪ್ಪೆಯೂ ತುಂಬಾ ಪ್ರಯೋಜನಕಾರಿ. ಇದು ದೇಹದಲ್ಲಿನ ಫ್ಯಾಟಿ ಟಿಶ್ಯೂ ಬೆಳವಣಿಗೆಯನ್ನು ತಡೆಯುತ್ತದೆ. ಮಾವಿನ ಸಿಪ್ಪೆಯನ್ನು ಒಣಗಿಸಿ ಅದರ ಪುಡಿಯನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆ ಉತ್ತಮಗೊಳ್ಳುತ್ತದೆ.
ಮಾವಿನ ಹಳದಿ ಮತ್ತು ಕಿತ್ತಳೆ ಭಾಗಗಳಲ್ಲಿ ಬೀಟಾ ಕ್ಯಾರೋಟಿನ್ ಕಂಡುಬರುತ್ತದೆ ಎಂದು ತಜ್ಞರು ಹೇಳುತ್ತಾರೆ. ಮಾವಿನಲ್ಲಿರುವ ಆಂಟಿ ಆಕ್ಸಿಡೆಂಟ್ ದೇಹದಲ್ಲಿನ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುತ್ತದೆ. ಇದು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ ಇದು ಕ್ಯಾನ್ಸರ್ ಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ.