Mango Milkshake : ಮಾವಿನ ಹಣ್ಣಿನ ಮಿಲ್ಕ್ ಶೇಕ್ ಸೇವನೆಯ ಪ್ರಯೋಜನಗಳಿವು.!
ಮಾವಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಒ, ಪೊಟ್ಯಾಸಿಯಮ್, ಕಬ್ಬಿಣ ಮತ್ತು ಫೋಲಿಕ್ ಆಮ್ಲ ಸೇರಿದಂತೆ ಅಗತ್ಯವಾದ ಪೋಷಕಾಂಶಗಳಿವೆ.
ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಮತ್ತು ಮಕ್ಕಳಲ್ಲಿ ರಕ್ತಹೀನತೆ ಹೆಚ್ಚು ಸಾಮಾನ್ಯವಾಗಿದೆ. ಆಹಾರದಲ್ಲಿ ಕಬ್ಬಿಣದ ಕೊರತೆಯಿಂದ ಉಂಟಾಗುತ್ತದೆ. ಮಾವಿನ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಕಬ್ಬಿಣದ ಅಂಶವನ್ನು ಹೆಚ್ಚಿಸುವುದು ಮಾತ್ರವಲ್ಲದೆ ರಕ್ತದ ಹಿಮೋಗ್ಲೋಬಿನ್ ಮಟ್ಟ ಸರಿಯಾಗುತ್ತದೆ.
ಬೇಸಿಗೆಯಲ್ಲಿ ಹೆಚ್ಚಿನ ಶಾಖದ ಕಾರಣ, ದೇಹದಲ್ಲಿ ನೀರಿನ ಕೊರತೆಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಮಾವಿನ ರಸವು ತ್ವರಿತ ಪರಿಹಾರ ನೀಡುತ್ತದೆ. ಇದು ದೇಹದಲ್ಲಿನ ಹೀಟ್ ನ್ನು ತಡೆಯುತ್ತದೆ.
ಮಾವಿನಹಣ್ಣಿನಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಇದ್ದು, ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ.
ಪ್ರತಿದಿನ ಮಾವಿನ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಅಧಿಕ ರಕ್ತದೊತ್ತಡವನ್ನು ತಡೆಯಬಹುದು. ಇದರಲ್ಲಿರುವ ವಿಟಮಿನ್ ಗಳು ಕೆಟ್ಟ ಕೊಲೆಸ್ಟ್ರಾಲ್ ದೇಹದಲ್ಲಿ ಉಳಿಯಲು ಬಿಡುವುದಿಲ್ಲ.
ಮಾವು ವಿಟಮಿನ್ ಎ ಯಲ್ಲಿ ಸಮೃದ್ಧವಾಗಿದೆ, ಆದ್ದರಿಂದ ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ.