Health Tips: ಕೆಟ್ಟ ಕೊಲೆಸ್ಟ್ರಾಲ್ ನಿರ್ಮೂಲನೆಗೆ ಈ ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ!
Healthy Diet: ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ನೀವು ನಿಮ್ಮ ಆಹಾರದಲ್ಲಿ ಕೆಲ ಪದಾರ್ಥಗಳನ್ನು ಶಾಮೀಲುಗೊಳಿಸುವುದು ಉತ್ತಮ. ಹಾಗಾದರೆ ಬನ್ನಿ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿರಿಸುವ ಆ ಆಹಾರ ಪದಾರ್ಥಗಳು ಯಾವುವು ತಿಳಿದುಕೊಳ್ಳೋಣ,
ಹಣ್ಣುಗಳು- ನಿತ್ಯ ಹಣ್ಣುಗಳ ಸೇವನೆ ಒಂದು ಉತ್ತಮ ಅಭ್ಯಾಸ. ಪ್ರತಿನಿತ್ಯ ಕನಿಷ್ಠ ಒಂದು ಹಣ್ಣನ್ನು ತಿನ್ನಲು ಪ್ರಯತ್ನಿಸಬೇಕು. ಹಣ್ಣುಗಳನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಆದರೆ, ಪ್ರಮುಖವಾಗಿ ನಿತ್ಯ ಒಂದು ಹಣ್ಣನ್ನು ಸೇವಿಸುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ.

ನಟ್ಸ್ ಅಥವಾ ಬೀಜಗಳು- ದೇಹದಲ್ಲಿ ಹೆಚ್ಚಾದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಡ್ರೈಫ್ರೂಟ್ಸ್ ಅಥವಾ ನಟ್ಸ್ ಅಥವಾ ಬೀಜಗಳು ತುಂಬಾ ಸಹಕಾರಿಯಾಗಿವೆ. ಇದಕ್ಕಾಗಿ ನೀವೂ ಕೂಡ ನಿಮ್ಮ ಆಹಾರದಲ್ಲಿ ಬಾದಾಮಿ, ವಾಲ್ ನಟ್ಸ್, ಗೋಡಂಬಿಗಳಂತಹ ವಿವಿಧ ರೀತಿಯ ಡ್ರೈ ಫ್ರೂಟ್ಸ್ ಅಥವಾ ಬೀಜಗಳನ್ನು ಸೇರಿಸಿಕೊಳ್ಳಬಹುದು. ಈ ಡ್ರೈಫ್ರೂಟ್ ಗಳು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದ್ದು, ಅವು ದೇಹದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.
ಧಾನ್ಯಗಳು- ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಾಗ ಆದಷ್ಟು ಹೆಚ್ಚು ಸಿರಿಧಾನ್ಯಗಳನ್ನು ನೀವು ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಬಹುದು. ಈ ರೀತಿ ಮಾಡುವುದರಿಂದ ದೇಹದಲ್ಲಿ ಹೆಚ್ಚಾಗಿರುವ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)