Health Tips: ಕಲ್ಲಂಗಡಿ ಬೀಜ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳು

Sun, 21 Apr 2024-5:36 pm,

ಕಲ್ಲಂಗಡಿ ಬೀಜಗಳಲ್ಲಿನ ಮೆಗ್ನೀಸಿಯಮ್, ಕಾರ್ಬೋಹೈಡ್ರೇಟ್‌ಗಳು ಚಯಾಪಚಯ ಕ್ರಿಯೆಗೆ ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಕಲ್ಲಂಗಡಿ ಬೀಜಗಳು ಟೈಪ್-2 ಮಧುಮೇಹವನ್ನು ತಡೆಯುತ್ತದೆ. 

ಕಲ್ಲಂಗಡಿ ಬೀಜಗಳಲ್ಲಿ ಪ್ರೋಟೀನ್, ಮೆಗ್ನೀಸಿಯಮ್, ಸತು, ಕಬ್ಬಿಣ ಮತ್ತು ಆರೋಗ್ಯಕರ ಕೊಬ್ಬುಗಳಿವೆ. ಇವು ದೇಹದಲ್ಲಿ ಪೌಷ್ಟಿಕಾಂಶದ ಕೊರತೆಯನ್ನು ತುಂಬುವುದರ ಜೊತೆಗೆ ಆರೋಗ್ಯ ಪ್ರಯೋಜನ ಒದಗಿಸುತ್ತವೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಕಲ್ಲಂಗಡಿ ಬೀಜಗಳಲ್ಲಿ ವಿಟಮಿನ್ ʼಸಿʼ ಮತ್ತು ಆಂಟಿ-ಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಇವು ಚರ್ಮವನ್ನು ಸ್ವಚ್ಛವಾಗಿಡಲು ಸಹಾಯ ಮಾಡುತ್ತವೆ. ಅಕಾಲಿಕ ವಯಸ್ಸಾಗುವಿಕೆಯನ್ನು ತಡೆಯುತ್ತದೆ. ಇದು ಒಣ ತ್ವಚೆ ಮತ್ತು ತುರಿಕೆ ಸಮಸ್ಯೆಯನ್ನೂ ನಿವಾರಿಸುತ್ತದೆ. ಕಲ್ಲಂಗಡಿ ಬೀಜಗಳು ಚರ್ಮದ ಮೇಲೆ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತವೆ.

ಕಲ್ಲಂಗಡಿ ಬೀಜಗಳಲ್ಲಿ ಪ್ರೋಟೀನ್‌, ಕಬ್ಬಿಣ, ಸತು, ಮೆಗ್ನೀಸಿಯಮ್ ಹೇರಳವಾಗಿದೆ. ಈ ಪದಾರ್ಥಗಳು ಕೂದಲಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕಲ್ಲಂಗಡಿ ಬೀಜಗಳು ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಕೂದಲು ಹಾನಿಯಾಗದಂತೆ ರಕ್ಷಿಸುತ್ತದೆ.

ಕಲ್ಲಂಗಡಿ ಬೀಜಗಳು ಏಕಾಪರ್ಯಾಪ್ತ ಮತ್ತು ಬಹುಅಪರ್ಯಾಪ್ತ ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ. ಈ ಆರೋಗ್ಯಕರ ಕೊಬ್ಬುಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ ಕಲ್ಲಂಗಡಿ ಬೀಜಗಳಲ್ಲಿರುವ ಮೆಗ್ನೀಸಿಯಮ್ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಈ ಬೀಜಗಳು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link