Health Benefits of Cucumber: ಸೌತೆಕಾಯಿ ಸೇವನೆಯ ಅದ್ಭುತ ಪ್ರಯೋಜನಗಳು
ಸೌತೆಕಾಯಿಯಲ್ಲಿ ಸುಮಾರು ಶೇ.95ರಷ್ಟು ನೀರು ಇರುತ್ತದೆ. ಸೌತೆಕಾಯಿಯಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ. ಫೈಬರ್ಗಳು ಮಲಬದ್ಧತೆ ತಡೆಯಲು ಮತ್ತು ಜೀರ್ಣಕ್ರಿಯೆ ಸುಧಾರಿಸಲು ಸಹಕಾರಿ. ಸೌತೆಕಾಯಿಯು ಬೀಟಾ-ಕ್ಯಾರೋಟಿನ್‌ನಂತಹ ಆ್ಯಂಟಿ ಆಕ್ಸಿಡೆಂಟ್ಗಳಲ್ಲಿ ಸಮೃದ್ಧವಾಗಿದೆ.
ಸೌತೆಕಾಯಿ ನಿಮ್ಮ ದೇಹಕ್ಕೆ ನಿರ್ಜಲೀಕರಣ ಅಂದರೆ Dehydration ಆಗದಂತೆ ನೋಡಿಕೊಳ್ಳುತ್ತದೆ. ಸೌತೆಕಾಯಿಯಲ್ಲಿ ಶೇ.95 ರಷ್ಟುನೀರಿನಂಶವಿದ್ದು, ಇದು ನಿಮ್ಮ ದೇಹದಲ್ಲಿ ಹೆಚ್ಚು ನೀರಿನಂಶ ಇರುವಂತೆ ನೋಡಿಕೊಳ್ಳುತ್ತದೆ.
ಸೌತೆಕಾಯಿಯಲ್ಲಿ ಪೌಷ್ಠಿಕಾಂಶಗಳು ಹೇರಳವಾಗಿವೆ. ಫೈಬರ್, ಪೊಟ್ಯಾಷಿಯಂ ಹಾಗೂ ಮೆಗ್ನೀಷಿಯಂ ಕೂಡ ಹೆಚ್ಚಾಗಿದೆ. ಈ ಎಲ್ಲಾ ಪೌಷ್ಠಿಕಾಂಶಗಳು ರಕ್ತದೊತ್ತಡ ಕಡಿಮೆ ಮಾಡುತ್ತದೆ ಮತ್ತು ಪೊಟ್ಯಾಷಿಯಂ ಹಾಗೂ ನೀರಿನಂಶ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.
ಸೌತೆಕಾಯಿ ನೈಸರ್ಗಿಕವಾಗಿ ನಿಮ್ಮ ಚರ್ಮವನ್ನು ಪುನಶ್ಚೇತನಗೊಳಿಸುತ್ತದೆ. ಒಣಗಿದ ಚರ್ಮವಿದ್ದರೆ ಸೌತೆಕಾಯಿ ರಸವನ್ನು ಮುಖಕ್ಕೆ ಹಚ್ಚಿಕೊಂಡರೆ ಉತ್ತಮ ಹೊಳಪು ನಿಮ್ಮದಾಗುತ್ತದೆ.
ಕಪ್ಪು ಕಲೆ ನಿವಾರಿಸಲು ಹಾಗೂ ಕಣ್ಣುಗಳ ಬಳಿಯ ಪಫ್ಫಿನೆಸ್ ಕಡಿಮೆ ಮಾಡಲು ಸೌತೆಕಾಯಿಯ ರಸವನ್ನು ಕಣ್ಣು ಸುತ್ತ ಹಚ್ಚಿಕೊಳ್ಳಿ. ನೈಸರ್ಗಿಕ ಸೌಂದರ್ಯ ಚಿಕಿತ್ಸೆಗಾಗಿ ಸೌತೆಕಾಯಿ ಉತ್ತಮ ಆಯ್ಕೆಯಾಗಿದೆ.