Benefits of Onion: ಈರುಳ್ಳಿ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳು
ಹಸಿ ಈರುಳ್ಳಿ ಕ್ಯಾಲ್ಸಿಯಂನ ಅತ್ಯುತ್ತಮ ಮೂಲವಾಗಿದೆ. ಇದು ಬಲವಾದ ಮೂಳೆಗಳು ಮತ್ತು ಹಲ್ಲುಗಳನ್ನು ಕಾಪಾಡಿಕೊಳ್ಳಲು ಅವಶ್ಯಕ. ಕ್ಯಾಲ್ಸಿಯಂ ಆಸ್ಟಿಯೊಪೊರೋಸಿಸ್ ಅಪಾಯ ಕಡಿಮೆ ಮಾಡುತ್ತದೆ. ಇದು ಮೂಳೆಯ ನಷ್ಟ ಮತ್ತು ಮುರಿತದ ಅಪಾಯವನ್ನು ತಡೆಯಬಲ್ಲದು.
ಹಸಿ ಈರುಳ್ಳಿ ಅಲೈಲ್ ಪ್ರೊಪೈಲ್ ಡೈಸಲ್ಫೈಡ್ ಎಂಬ ಸಂಯುಕ್ತ ಹೊಂದಿರುತ್ತದೆ. ಇದು ಟೈಪ್ 2 ಡಯಾಬಿಟಿಸ್ ಹೊಂದಿರುವ ಜನರಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಕಾರಿ. ಆಲಿಲ್ ಪ್ರೊಪಿಲ್ ಡೈಸಲ್ಫೈಡ್ ಇನ್ಸುಲಿನ್ ಸೂಕ್ಷ್ಮತೆ ಹೆಚ್ಚಿಸುವ ಮೂಲಕ ಕಾರ್ಯನಿರ್ವಹಿಸುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಹಾಯ ಮಾಡುತ್ತದೆ.
ಈರುಳ್ಳಿ ಬೇಯಿಸಿ ಸೇವಿಸಿದ್ರೆ ರುಚಿ ಸಿಗುತ್ತದೆ. ಆದರೆ ಹಸಿ ಈರುಳ್ಳಿ ತಿನ್ನುವುದರಿಂದ ನಿಮಗೆ ಹೇರಳ ಪೋಷಕಾಂಶ ದೊರೆಯುತ್ತದೆ. ಈರುಳ್ಳಿ ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಇದು ಒಟ್ಟಾರೆ ಆರೋಗ್ಯ ಉತ್ತೇಜಿಸಲು ಸಹಕಾರಿಯಾಗಿದೆ.
ಹಸಿ ಈರುಳ್ಳಿ ಅಲೈಲ್ ಪ್ರೊಪೈಲ್ ಡೈಸಲ್ಫೈಡ್ ಎಂಬ ಸಂಯುಕ್ತ ಹೊಂದಿರುತ್ತದೆ. ಇದು ಟೈಪ್ 2 ಡಯಾಬಿಟಿಸ್ ಹೊಂದಿರುವ ಜನರಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಕಾರಿ. ಆಲಿಲ್ ಪ್ರೊಪಿಲ್ ಡೈಸಲ್ಫೈಡ್ ಇನ್ಸುಲಿನ್ ಸೂಕ್ಷ್ಮತೆ ಹೆಚ್ಚಿಸುವ ಮೂಲಕ ಕಾರ್ಯನಿರ್ವಹಿಸುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಹಾಯ ಮಾಡುತ್ತದೆ.
ಹಸಿ ಈರುಳ್ಳಿಯು ಆರ್ಗನೊಸಲ್ಫರ್ ಎಂಬ ಸಂಯುಕ್ತ ಹೊಂದಿರುತ್ತದೆ. ಇದು ಹೊಟ್ಟೆ ಮತ್ತು ಕರುಳಿನ ಕ್ಯಾನ್ಸರ್ ಸೇರಿ ಹಲವಾರು ರೀತಿಯ ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆರ್ಗನೊಸಲ್ಫರ್ ಸಂಯುಕ್ತಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತವೆ.