Health Benefits of Fennel Seeds: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಕಾಳು ಹಾಕಿದ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದರಲ್ಲಿ ಫೈಬರ್ ಮತ್ತು ಕಡಿಮೆ ಕ್ಯಾಲೊರಿ ಇರುವುದರಿಂದ ನೀವು ಸುಲಭವಾಗಿ ತೂಕ ನಷ್ಟ ಮಾಡಿಕೊಳ್ಳಬಹುದು.
Fennel Seeds Benefits: ಸೋಂಪು ಕಾಳುಗಳನ್ನು ಸೇವಿಸುವುದರಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಪ್ರತಿದಿನ ಬೆಳಗ್ಗೆ ಒಂದು ಕಪ್ ಸೋಂಪು ಕಾಳಿನ ನೀರು ಸೇವಿಸಿದರೆ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಕಾರ್ಮಿನೇಟಿವ್ ಗುಣಲಕ್ಷಣಗಳನ್ನು ಹೊಂದಿದ್ದು, ದೇಹದಿಂದ ಗ್ಯಾಸ್ ಹೊರಹಾಕಲು, ಹೊಟ್ಟೆಯುಬ್ಬರ ಮತ್ತು ಅಜೀರ್ಣವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಯ ಪ್ರಕ್ರಿಯೆ ಉತ್ತೇಜಿಸಲು ಮತ್ತು ಒಟ್ಟಾರೆ ಜೀರ್ಣಾಂಗವ್ಯೂಹದ ಆರೋಗ್ಯವನ್ನು ಬೆಂಬಲಿಸುತ್ತದೆ. ಇದರಲ್ಲಿ ವಿಟಮಿನ್ಸ್, ಮಿನರಲ್ಸ್, ಫೈಬರ್, ಆಂಟಿ-ಆಕ್ಸಿಡೆಂಟ್ಸ್ ಸಮೃದ್ಧವಾಗಿವೆ. ಪ್ರತಿದಿನ ಊಟ ಆದಮೇಲೆ ಕೇವಲ ಒಂದು ಸ್ಪೂನ್ ಸೋಂಪು ಕಾಳುಗಳನ್ನು ತಿನ್ನುವುದರಿಂದ ಆರೋಗ್ಯಕ್ಕೆ ಯಾವೆಲ್ಲಾ ಪ್ರಯೋಜನಗಳಿವೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಅಜೀರ್ಣ ಸಮಸ್ಯೆಯಿಂದ ಸಾಮಾನ್ಯವಾಗಿ ಹೊಟ್ಟೆಯುಬ್ಬರ ಉಂಟಾಗುತ್ತದೆ. ಇದರಿಂದ ಗ್ಯಾಸ್ಟ್ರಿಕ್ ಹೆಚ್ಚಾಗಿ ಸಮಸ್ಯೆ ಹೆಚ್ಚಾಗುತ್ತದೆ. ಗ್ಯಾಸ್ಟ್ರಿಕ್ ಮಾತ್ರೆಗಳನ್ನು ಸೇವಿಸುವುದರ ಬದಲು ಮನೆಯಲ್ಲಿಯೇ ಇರುವ ಸೋಂಪು ಕಾಳುಗಳನ್ನು ತಿನ್ನುವುದರಿಂದ ಅಜೀರ್ಣ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮುಕ್ತಿ ದೊರೆಯುತ್ತದೆ.
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಕಾಳು ಹಾಕಿದ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದರಲ್ಲಿ ಫೈಬರ್ ಮತ್ತು ಕಡಿಮೆ ಕ್ಯಾಲೊರಿ ಇರುವುದರಿಂದ ನೀವು ಸುಲಭವಾಗಿ ತೂಕ ನಷ್ಟ ಮಾಡಿಕೊಳ್ಳಬಹುದು.
ಸೋಂಪು ಕಾಳಿನ ನೀರು ಕುಡಿಯುವುದರಿಂದ ಅಥವಾ ಸೋಂಪು ಕಾಳುಗಳನ್ನು ಸೇವಿಸುವುದರಿಂದ ಮುಖದಲ್ಲಿನ ಪಿಂಪಲ್ಸ್ ಅಥವಾ ಮೊಡವೆ ಕಡಿಮೆಯಾಗುತ್ತದೆ ಮತ್ತು ಮುಖದ ಹೊಳಪು ಹೆಚ್ಚಾಗುತ್ತದೆ. ಬಾಯಿಯ ದುರ್ವಾಸನೆಯಿಂದಲೂ ಮುಕ್ತಿ ದೊರೆಯುತ್ತದೆ.
ನಿಯಮಿತವಾಗಿ ಸೋಂಪು ಕಾಳುಗಳನ್ನು ಸೇವಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮವಾಗುತ್ತದೆ. ಮೂಳೆಗಳ ಆರೋಗ್ಯಕ್ಕೂ ಸಹ ಸೋಂಪು ಕಾಳುಗಳು ಸಹಕಾರಿಯಾಗಿವೆ. ಗರ್ಭಿಣಿಯರು ಸೋಂಪು ಕಾಳುಗಳನ್ನು ತಿನ್ನುವುದರಿಂದ ಎದೆ ಹಾಲು ಹೆಚ್ಚಾಗುತ್ತದೆ.
ಸೋಂಪು ಕಾಳುಗಳನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡವು ನಿಯಂತ್ರಣಕ್ಕೆ ಬರುತ್ತದೆ. ಇದಲ್ಲದೆ ರಕ್ತದಲ್ಲಿನ ಸಕ್ಕರೆಯ ಮಟ್ಟವು ಕಡಿಮೆಯಾಗುತ್ತದೆ. ಹೃದಯದ ಆರೋಗ್ಯಕ್ಕೆ ಸಹ ಸೋಂಪು ಕಾಳುಗಳು ಸಹಕಾರಿಯಾಗಿವೆ.