Health Benefits Of Kiwi: ಕಿವಿ ಹಣ್ಣಿನ ಅದ್ಭುತ ಆರೋಗ್ಯ ಪ್ರಯೋಜನಗಳು
ಕಿವಿ ಹಣ್ಣು ಮೂಳೆ ಆರೋಗ್ಯಕ್ಕೆ ಪ್ರಯೋಜನಕಾರಿ. ಕಿವಿ ಹಣ್ಣಿನಲ್ಲಿರುವ ವಿಟಮಿನ್ ಕೆ ಆಸ್ಟಿಯೋಟ್ರೋಪಿಕ್ ಚಟುವಟಿಕೆಗೆ ಸಹಾಯ ಮಾಡುತ್ತದೆ. ವಿಟಮಿನ್ ಕೆ ಹೊಸ ಮೂಳೆ ಕೋಶಗಳ ರಚನೆಗೆ ಸಹಾಯ ಮಾಡುತ್ತದೆ. ಮೂಳೆಯ ದ್ರವ್ಯರಾಶಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಕಿವಿಯಲ್ಲಿರುವ ಪೋಷಕಾಂಶಗಳು ಮೂಳೆಗಳನ್ನು ನಿರ್ಮಿಸುತ್ತವೆ.
ಕಿವಿ ಹಣ್ಣು ಸೇವಿಸಿದರೆ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ವಿಟಮಿನ್ ಸಿ ಮತ್ತು ವಿಟಮಿನ್ ಕೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕಿವಿ ತಿನ್ನುವುದರಿಂದ ಕೆಮ್ಮು ಮತ್ತು ಶೀತಗಳಂತಹ ಕಾಯಿಲೆಗಳನ್ನು ತಡೆಯಬಹುದು.
ಕಿವಿಹಣ್ಣು ಸೇವನೆಯು ರಕ್ತದೊತ್ತಡವನ್ನು ನಿಯಂತ್ರಿಸುವುದರ ಜೊತೆಗೆ ಹೃದಯವನ್ನು ಆರೋಗ್ಯವಾಗಿಡಲು ತುಂಬಾ ಪರಿಣಾಮಕಾರಿ. ಖಾಲಿ ಹೊಟ್ಟೆಯಲ್ಲಿ ಕಿವಿಹಣ್ಣು ತಿನ್ನುವುದರಿಂದ ಹೃದಯಾಘಾತ ಮತ್ತು ಎದೆಯುರಿ ಮುಂತಾದ ಸಮಸ್ಯೆಗಳು ಕಡಿಮೆಯಾಗುತ್ತದೆ.
ಕಿವಿ ಹಣ್ಣಿನಲ್ಲಿ ನಾರಿನಂಶ ಹೇರಳವಾಗಿರುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನೂ ನಿವಾರಿಸುತ್ತದೆ. ದಿನನಿತ್ಯ ಖಾಲಿ ಹೊಟ್ಟೆಯಲ್ಲಿ ಕಿವಿ ತಿನ್ನುವುದರಿಂದ ಹೊಟ್ಟೆ ಸ್ವಚ್ಛವಾಗಿರುತ್ತದೆ. ಜೊತೆಗೆ ಮಲಬದ್ಧತೆ, ಅಸಿಡಿಟಿ ಮತ್ತು ಗ್ಯಾಸ್ ಸಮಸ್ಯೆಗೆ ಮುಕ್ತಿ ದೊರೆಯುತ್ತದೆ.
ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಿವಿ ಹಣ್ಣನ್ನು ತಿನ್ನುವುದರಿಂದ ದೇಹದಲ್ಲಿನ ಪೋಷಕಾಂಶಗಳ ಕೊರತೆ ನೀಗುತ್ತದೆ. ಕಿವಿ ಹಣ್ಣನ್ನು ನಿಯಮಿತವಾಗಿ ತಿನ್ನುವುದರಿಂದ ತೂಕ ಕಳೆದುಕೊಳ್ಳಬಹುದು. ಖಾಲಿ ಹೊಟ್ಟೆಯಲ್ಲಿ ಕಿವಿ ತಿಂದರೆ ಹೆಚ್ಚು ಹೊತ್ತು ಹಸಿವಾಗುವುದಿಲ್ಲ.