Roasted Chana Dal: ಹುರಿಗಡಲೆ ತಿನ್ನುವುದರಿಂದ ಇಷ್ಟೊಂದು ಆರೋಗ್ಯ ಪ್ರಯೋಜನಗಳಿವೆ
ಹುರಿಗಡಲೆ ಸಸ್ಯ ಆಧಾರಿತ ಪ್ರೋಟೀನ್‌ನ ಅತ್ಯುತ್ತಮ ಮೂಲವಾಗಿದೆ. ಇದು ಸಸ್ಯಾಹಾರಿಗಳಿಗೆ ಸೂಕ್ತವಾದ ತಿಂಡಿಯಾಗಿದೆ. ಇದರಲ್ಲಿರುವ ಫೈಬರ್ ಜೀರ್ಣಕಾರಿ ಆರೋಗ್ಯಕ್ಕೆ ಪ್ರಮುಖವಾಗಿದ್ದು, ಕರುಳಿನ ಚಲನೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹುರಿಗಡಲೆ ಕರಗುವ & ಕರಗದ ಫೈಬರ್ ಹೊಂದಿರುತ್ತದೆ. ಇದು ಆರೋಗ್ಯಕರ ಕರುಳನ್ನು ಉತ್ತೇಜಿಸಲು & ಮಲಬದ್ಧತೆ ತಡೆಯಲು ಸಹಾಯ ಮಾಡುತ್ತದೆ.
ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ (GI) ಹೊಂದಿರುವ ಆಹಾರಗಳು ಸಕ್ಕರೆಯನ್ನು ನಿಧಾನವಾಗಿ ರಕ್ತಪ್ರವಾಹಕ್ಕೆ ಬಿಡುಗಡೆ ಮಾಡುತ್ತವೆ. ನಿರಂತರ ಶಕ್ತಿಯ ಮಟ್ಟವನ್ನು ಒದಗಿಸುತ್ತವೆ & ರಕ್ತದಲ್ಲಿನ ಸಕ್ಕರೆಯ ಏರಿಕೆಯನ್ನು ತಡೆಯುತ್ತದೆ. ಹುರಿಗಡಲೆಯು ಕಡಿಮೆ GI ಹೊಂದಿವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮೇಲ್ವಿಚಾರಣೆ ಮಾಡುವವರಿಗೆ ಸೂಕ್ತವಾಗಿದೆ.
ಹುರಿಗಡಲೆ ಅಗತ್ಯವಾದ ಜೀವಸತ್ವಗಳು ಮತ್ತು ಕಬ್ಬಿಣ, ಮೆಗ್ನೀಸಿಯಮ್, ರಂಜಕ ಮತ್ತು ವಿಟಮಿನ್ B6ನಂತಹ ಖನಿಜಗಳಲ್ಲಿ ಸಮೃದ್ಧವಾಗಿದೆ. ಈ ಪೋಷಕಾಂಶಗಳು ಶಕ್ತಿ ಉತ್ಪಾದನೆ ಮತ್ತು ಪ್ರತಿರಕ್ಷಣಾ ವ್ಯವಸ್ಥೆಯ ಆರೋಗ್ಯ ಸೇರಿದಂತೆ ವಿವಿಧ ದೈಹಿಕ ಕಾರ್ಯಗಳನ್ನು ಬೆಂಬಲಿಸುತ್ತವೆ.
ಹುರಿಗಡಲೆಯಲ್ಲಿರುವ ಫೈಬರ್, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಅಂಶವು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.
ಹುರಿಗಡಲೆಯಲ್ಲಿರುವ ಹೆಚ್ಚಿನ ಪ್ರೋಟೀನ್ ಮತ್ತು ಫೈಬರ್ ಅಂಶದಿಂದ ಸುಲಭವಾಗಿ ತೂಕ ನಿರ್ವಹಣೆಗೆ ಸಹಕಾರಿಯಾಗಲಿದೆ. ಇದರ ಸೇವನೆಯ ಬಳಿಕ ತುಂಬಾ ಹೊತ್ತು ಹೊಟ್ಟೆ ತುಂಬಿದ ಅನುಭವವಿರುತ್ತದೆ. ಇದು ತೂಕ ನಿರ್ವಹಣೆಗೆ ಮತ್ತು ಊಟದ ನಡುವೆ ಹಸಿವನ್ನು ನಿಯಂತ್ರಿಸಲು ಪ್ರಯೋಜನಕಾರಿ ತಿಂಡಿಯಾಗಿದೆ.