Sapota Health Benefits: ಸಪೋಟ ಸೇವಿಸಿದ್ರೆ ಹಲವಾರು ಆರೋಗ್ಯ ಪ್ರಯೋಜನಗಳು

Amazing health benefits of Sapota: ಸಪೋಟ ಹಣ್ಣು ತ್ವಚೆಯ ಆರೋಗ್ಯ ಮತ್ತು ಸೌಂದರ್ಯ ವೃದ್ಧಿಗೆ ಸಹಕಾರಿ. ಇದರಲ್ಲಿರು ವಿಟಮಿನ್ A, C, E ಮತ್ತು K ಚರ್ಮವನ್ನು ಹೈಡ್ರೇಟ್ ಆಗಿಡುತ್ತದೆ.

Sapota Health Benefits: ಸಪೋಟ ಹಣ್ಣಿಗೆ ಚಿಕ್ಕು ಎಂತಲೂ ಕರೆಯುತ್ತಾರೆ. ಚಿಕ್ಕು ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಚಿಕ್ಕು ಹಣ್ಣಿನಲ್ಲಿರುವ ಕೆಲವು ಖನಿಜಾಂಶಗಳು, ಕ್ಯಾಲ್ಸಿಯಂ, ತಾಮ್ರ ಹಾಗೂ ಕಬ್ಬಿಣಾಂಶವು ಮೂಳೆಗಳನ್ನು ಬಲಪಡಿಸುತ್ತದೆ. ನಿಯಮಿತವಾಗಿ ಚಿಕ್ಕು ಹಣ್ಣು ಸೇವಿಸಿದರೆ ಮೂಳೆಗಳ ಆರೋಗ್ಯವು ವೃದ್ಧಿಯಾಗುತ್ತದೆ. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ ಹಾಗೂ ನೋವು ಮತ್ತು ಊತ ಚಿಕಿತ್ಸೆಗೆ ಇದು ಪರಿಣಾಮಕಾರಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

1 /5

ಸಪೋಟ ಹಣ್ಣಿನಲ್ಲಿ ವಿಟಮಿನ್ C, A ಮತ್ತು ಕಬ್ಬಿನಾಂಶ, ಪೊಟಾಶಿಯಂ ಮತ್ತು ತಾಮ್ರವಿದೆ. ಆಂಟಿಆಕ್ಸಿಡೆಂಟ್, ಉರಿಯೂತ ಶಮನಕಾರಿ, ವೈರಲ್ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ನಂಜುನಿರೋಧಕ ಗುಣಗಳು ಕೂಡ ಇದರಲ್ಲಿವೆ.

2 /5

ಚಿಕ್ಕು ಹಣ್ಣು ಗ್ಯಾಸ್ಟ್ರಿಕ್ ಹಾಗೂ ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುವುದು. ಇದರಲ್ಲಿ ನಾರಿನಾಂಶ ಅಧಿಕವಾಗಿದ್ದು, ಜೀರ್ಣಕ್ರಿಯೆಗೆ ಸಹಕಾರಿದೆ. ಇದು ಮಲಬದ್ಧತೆ ಇರುವವರಿಗೆ ತುಂಬಾ ಒಳ್ಳೆಯದು.

3 /5

ಸಪೋಟ ಹಣ್ಣಿನಲ್ಲಿರುವ ಕ್ಯಾಲ್ಸಿಯಂ, ಪೋಸ್ಪರಸ್, ತಾಮ್ರ ಮತ್ತು ಕಬ್ಬಿನಾಂಶವು ಮೂಳೆಯನ್ನು ಬಲಗೊಳಿಸುವಲ್ಲಿ ಸಹಕಾರಿಯಾಗಿವೆ.

4 /5

ಚಿಕ್ಕು ಹಣ್ಣಿನಲ್ಲಿರುವ ವಿಟಮಿನ್ C, A ಮತ್ತು ಆಂಟಿಆಕ್ಸಿಡೆಂಟ್‍ಗಳು ಪ್ರತಿರೋಧಕ ಶಕ್ತಿಯನ್ನು ಬಲಿಷ್ಠವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

5 /5

ಸಪೋಟ ಹಣ್ಣು ದೇಹದ ಶಕ್ತಿಯನ್ನು ವೃದ್ಧಿಸುತ್ತದೆ. ಚರ್ಮದ ಆರೋಗ್ಯ ವೃದ್ಧಿಸುವುದು ಮತ್ತು ದೀರ್ಘಕಾಲಿಕ ಕಾಯಿಲೆಗಳ ಅಪಾಯ ತಗ್ಗಿಸುವುದು. ಇದು ವೈರಸ್, ಬ್ಯಾಕ್ಟೀರಿಯಾಗಳಿಂದ ರಕ್ಷಣೆ ನೀಡುತ್ತದೆ.