Sapota Health Benefits: ಸಪೋಟ ಸೇವಿಸಿದ್ರೆ ಹಲವಾರು ಆರೋಗ್ಯ ಪ್ರಯೋಜನಗಳು
ಸಪೋಟ ಹಣ್ಣಿನಲ್ಲಿ ವಿಟಮಿನ್ C, A ಮತ್ತು ಕಬ್ಬಿನಾಂಶ, ಪೊಟಾಶಿಯಂ ಮತ್ತು ತಾಮ್ರವಿದೆ. ಆಂಟಿಆಕ್ಸಿಡೆಂಟ್, ಉರಿಯೂತ ಶಮನಕಾರಿ, ವೈರಲ್ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ನಂಜುನಿರೋಧಕ ಗುಣಗಳು ಕೂಡ ಇದರಲ್ಲಿವೆ.
ಚಿಕ್ಕು ಹಣ್ಣು ಗ್ಯಾಸ್ಟ್ರಿಕ್ ಹಾಗೂ ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುವುದು. ಇದರಲ್ಲಿ ನಾರಿನಾಂಶ ಅಧಿಕವಾಗಿದ್ದು, ಜೀರ್ಣಕ್ರಿಯೆಗೆ ಸಹಕಾರಿದೆ. ಇದು ಮಲಬದ್ಧತೆ ಇರುವವರಿಗೆ ತುಂಬಾ ಒಳ್ಳೆಯದು.
ಸಪೋಟ ಹಣ್ಣಿನಲ್ಲಿರುವ ಕ್ಯಾಲ್ಸಿಯಂ, ಪೋಸ್ಪರಸ್, ತಾಮ್ರ ಮತ್ತು ಕಬ್ಬಿನಾಂಶವು ಮೂಳೆಯನ್ನು ಬಲಗೊಳಿಸುವಲ್ಲಿ ಸಹಕಾರಿಯಾಗಿವೆ.
ಚಿಕ್ಕು ಹಣ್ಣಿನಲ್ಲಿರುವ ವಿಟಮಿನ್ C, A ಮತ್ತು ಆಂಟಿಆಕ್ಸಿಡೆಂಟ್‍ಗಳು ಪ್ರತಿರೋಧಕ ಶಕ್ತಿಯನ್ನು ಬಲಿಷ್ಠವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಸಪೋಟ ಹಣ್ಣು ದೇಹದ ಶಕ್ತಿಯನ್ನು ವೃದ್ಧಿಸುತ್ತದೆ. ಚರ್ಮದ ಆರೋಗ್ಯ ವೃದ್ಧಿಸುವುದು ಮತ್ತು ದೀರ್ಘಕಾಲಿಕ ಕಾಯಿಲೆಗಳ ಅಪಾಯ ತಗ್ಗಿಸುವುದು. ಇದು ವೈರಸ್, ಬ್ಯಾಕ್ಟೀರಿಯಾಗಳಿಂದ ರಕ್ಷಣೆ ನೀಡುತ್ತದೆ.