Star Fruit Health Benefits: ಮಧುಮೇಹಿಗಳು ನಕ್ಷತ್ರ ಹಣ್ಣನ್ನು ಸೇವಿಸಬಹುದು. ಇದು ರಕ್ತದಲ್ಲಿನ ಇನ್ಸುಲಿನ್ ಮಟ್ಟವನ್ನು ಸುಧಾರಿಸಲು ಸಹಕಾರಿಯಾಗಿದೆ. ಸ್ಟಾರ್ ಫ್ರುಟ್‌ನಲ್ಲಿ ಫೈಬರ್ ಅಂಶ ಸಮೃದ್ಧವಾಗಿದ್ದು, ಮಧುಮೇಹವನ್ನು ನಿಯಂತ್ರಿಸುತ್ತದೆ.
Health Benefits Of Star Fruit: ನಕ್ಷತ್ರ ಹಣ್ಣು, ಸ್ಟಾರ್ ಫ್ರುಟ್ ಅಥವಾ ಕ್ಯಾರಂಬೋಲಾ ಹಣ್ಣು ಎಂದು ಕರೆಯುವ ಈ ಹಣ್ಣು ಹಲವಾರು ಆರೋಗ್ಯರ ಪ್ರಯೋಜನ ಹೊಂದಿದೆ. ನಕ್ಷತ್ರದ ಆಕೃತಿಯಲ್ಲಿರುವ ಈ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿನ ಅನೇಕ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ನಕ್ಷತ್ರದ ಹಣ್ಣುಗಳು ಮೊದಲು ಹಸಿರು ಬಣ್ಣದಲ್ಲಿರುತ್ತವೆ. ನಂತರ ಹಳದಿ ಬಣ್ಣಕ್ಕೆ ತಿರುಗುತ್ತದೆ. ಮಾಗಿದ ನಕ್ಷತ್ರದ ಹಣ್ಣು ತಿರುಳಿರುವ, ಕುರುಕುಲಾದ ಮತ್ತು ರಸಭರಿತವಾಗಿರುತ್ತದೆ. ಇವು ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯನ್ನು ಹೊಂದಿರುತ್ತದೆ. ನಕ್ಷತ್ರದ ಹಣ್ಣುಗಳ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ನಕ್ಷತ್ರ ಹಣ್ಣಿನಲ್ಲಿ ವಿಟಮಿನ್ ʼBʼ, ʼCʼ, ಸೋಡಿಯಂ, ಪೊಟ್ಯಾಸಿಯಂ, ಫೈಬರ್, ಕ್ಯಾಲ್ಸಿಯಂ ಸಮೃದ್ಧವಾಗಿವೆ. ನಿಯಮಿತವಾಗಿ ಈ ಹಣ್ಣು ಸೇವಿಸಿದ್ರೆ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯುತ್ತೀರಿ.
ನಕ್ಷತ್ರ ಹಣ್ಣು ಹೃದಯದ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದರಲ್ಲಿರುವ ಕ್ಯಾಲ್ಸಿಯಂ, ಪೊಟ್ಯಾಸಿಯಂ ಅಂಶಗಳು ರಕ್ತದ ಹರಿವನ್ನು ಸುಧಾರಿಸುತ್ತದೆ. ಸ್ಟಾರ್ ಫ್ರುಟ್ ಹೃದಯವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಲು ಸಹಾಯ ಮಾಡುತ್ತದೆ. ಹಾರ್ಟ್ ಅಟ್ಯಾಕ್‌ನಂತಹ ಅಪಾಯದಿಂದ ನಿಮ್ಮನ್ನು ಪಾರು ಮಾಡುತ್ತದೆ.
ಮಧುಮೇಹಿಗಳು ನಕ್ಷತ್ರ ಹಣ್ಣನ್ನು ಸೇವಿಸಬಹುದು. ಇದು ರಕ್ತದಲ್ಲಿನ ಇನ್ಸುಲಿನ್ ಮಟ್ಟವನ್ನು ಸುಧಾರಿಸಲು ಸಹಕಾರಿಯಾಗಿದೆ. ಸ್ಟಾರ್ ಫ್ರುಟ್‌ನಲ್ಲಿ ಫೈಬರ್ ಅಂಶ ಸಮೃದ್ಧವಾಗಿದ್ದು, ಮಧುಮೇಹವನ್ನು ನಿಯಂತ್ರಿಸುತ್ತದೆ.
ನಕ್ಷತ್ರ ಹಣ್ಣಿನಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆಗೆ ಉಪಯುಕ್ತವಾಗಿದೆ. ಫೈಬರ್ ಅಂಶವು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ಈ ಹಣ್ಣನ್ನು ನಿಯಮಿತವಾಗಿ ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ.
ನಕ್ಷತ್ರ ಹಣ್ಣಿನಲ್ಲಿ ವಿಟಮಿನ್ ʼCʼ ಸಮೃದ್ಧವಾಗಿದ್ದು, ದೇಹದಲ್ಲಿನ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಇದರಲ್ಲಿ ಹೇರಳ ನೀರಿನಾಂಶವಿರುವ ಕಾರಣ ದೇಹ ನಿರ್ಜಲೀಕರಣವಾಗದಂತೆ ತಡೆಯುತ್ತದೆ.