Health Tips: ಹೃದಯಾಘಾತ, ಕ್ಯಾನ್ಸರ್ ಸೇರಿದಂತೆ ಹತ್ತಾರು ಕಾಯಿಲೆಗಳಿಗೆ ಏಲಕ್ಕಿ ರಾಮಬಾಣ!
ಏಲಕ್ಕಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಕೆಮ್ಮು, ನೆಗಡಿ, ಗಂಟಲು ನೋವು ಮತ್ತು ಗಂಟಲಿನ ಸೋಂಕುಗಳಿಂದ ರಕ್ಷಿಸುತ್ತದೆ.
ಏಲಕ್ಕಿ ಹಾಲು ಹೃದಯವನ್ನು ಆರೋಗ್ಯವಾಗಿಡಲು ತುಂಬಾ ಉಪಯುಕ್ತವಾಗಿದೆ. ಪ್ರತಿದಿನವೂ ಏಲಕ್ಕಿ ತಿಂದರೆ ಹೃದಯದ ಅಪಧಮನಿಗಳಲ್ಲಿ ಬ್ಲಾಕ್ ಆಗುವುದಿಲ್ಲ.
ಏಲಕ್ಕಿಯಲ್ಲಿರುವ ಆಂಟಿ-ಆಕ್ಸಿಡೆಂಟ್ ಗುಣಲಕ್ಷಣಗಳು ಮತ್ತು ಮ್ಯಾಂಗನೀಸ್ ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ಸ್ವತಂತ್ರ ರಾಡಿಕಲ್‌ಗಳನ್ನು ನಾಶಪಡಿಸುತ್ತದೆ & ದೇಹವನ್ನು ನಿರ್ವಿಷಗೊಳಿಸುತ್ತದೆ.
ಏಲಕ್ಕಿ ಹಾಲು ಕುಡಿಯುವುದರಿಂದ ಕ್ಯಾನ್ಸರ್‌ನಂತಹ ಖಾಯಿಲೆಗಳನ್ನೂ ತಡೆಯಬಹುದು. ಇದು ಕ್ಯಾನ್ಸರ್ ಅಪಾಯವನ್ನು ತಡೆಯಲು ಸಹಾಯ ಮಾಡವ ಎಲ್ಲಾ ಅಂಶಗಳನ್ನು ಒಳಗೊಂಡಿದೆ.
ಏಲಕ್ಕಿ ಹಾಲು ಕುಡಿಯುವುದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳನ್ನು ತಡೆಯಬಹುದು.
ಏಲಕ್ಕಿ ಹಾಲನ್ನು ಪ್ರತಿದಿನವೂ ಕುಡಿಯುವುದರಿಂದ ನಿಮ್ಮ ಮೂಳೆಗಳು ಬಲಗೊಳ್ಳುತ್ತವೆ. ಏಕೆಂದರೆ ಹಾಲು ಮತ್ತು ಏಲಕ್ಕಿ ಎರಡರಲ್ಲೂ ಕ್ಯಾಲ್ಸಿಯಂ ಅಧಿಕವಾಗಿರುತ್ತದೆ.
ಏಲಕ್ಕಿಯಲ್ಲಿರುವ ಫೈಬರ್ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದನ್ನು ಪ್ರತಿದಿನವೂ ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಗ್ಯಾಸ್, ಉಬ್ಬುವಿಕೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತವೆ.