Diabetes: ಚಳಿಗಾಲದಲ್ಲಿ ಮಧುಮೇಹ ನಿಯಂತ್ರಣಕ್ಕೆ ಈ ಹಣ್ಣು ತರಕಾರಿ ಸೇವಿಸಿ
ಚಳಿಗಾಲದಲ್ಲಿ ಕ್ಯಾರೆಟ್ ಸೇವನೆ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುವ ಅನೇಕ ವಿಟಮಿನ್‌ಗಳನ್ನು ಹೊಂದಿದೆ.
ಚಳಿಗಾಲದಲ್ಲಿ ದಾಲ್ಚಿನ್ನಿ ಸೇವನೆಯಿಂದ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಬಹುದ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವೂ ನಿಯಂತ್ರಣದಲ್ಲಿರುತ್ತದೆ. ಹೀಗಾಗಿ ಮಧುಮೇಹಿಗಳು ಇದನ್ನು ತಪ್ಪದೆ ಸೇವಿಸಬೇಕು.
ಚಳಿಗಾಲದ ಸಮಯದಲ್ಲಿ ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಹಸಿರು ತರಕಾರಿ ಎಂದರೆ ಅದು ಪಾಲಕ್. ಮಧುಮೇಹ ರೋಗಿಗಳಿಗೆ ಇದು ಯಾವುದೇ ಔಷಧಿಗಿಂತ ಕಡಿಮೆಯಿಲ್ಲ, ಆದ್ದರಿಂದ ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು.
ಮಧುಮೇಹ ರೋಗಿಗಳಿಗೆ ಕಿತ್ತಳೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಕೆಲಸ ಮಾಡುತ್ತದೆ.
ಚಳಿಗಾಲದಲ್ಲಿ ಸಾಕಷ್ಟು ಸೀಬೆಹಣ್ಣುಗಳು ಮಾರುಕಟ್ಟೆಯಲ್ಲಿ ಲಭ್ಯವಿರುತ್ತವೆ, ಸೀಬೆ ಹಣ್ಣನ್ನು ಸೇವಿಸಿಯೂ ಕೂಡ ನೀವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.