Liver: ಯಕೃತ್ತನ್ನು ಆರೋಗ್ಯಕರವಾಗಿರಿಸಬೇಕೆ? ನಿಮ್ಮ ಆಹಾರದಲ್ಲಿರಲಿ ಈ ಸಂಗತಿಗಳು
1. ಪ್ರತಿದಿನ ಸೇಬನ್ನು ಸೇವಿಸುವುದರಿಂದ, ನಿಮ್ಮ ಯಕೃತ್ತು ಆರೋಗ್ಯಕರವಾಗಿರುತ್ತದೆ ಮತ್ತು ದೇಹವು ಸಹ ಸದೃಢವಾಗಿರುತ್ತದೆ
2. ಪ್ರತಿದಿನ ಸೌತೆಕಾಯಿಯನ್ನು ಸೇವಿಸುವುದರಿಂದ ಯಕೃತ್ತನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಹೀಗಾಗಿ ನೀವು ಸೌತೆಕಾಯಿಯನ್ನು ಸಲಾಡ್ ರೂಪದಲ್ಲಿ ಸೇವಿಸಬಹುದು.
3. ಕಲ್ಲಂಗಡಿ ತಿನ್ನಲು ತುಂಬಾ ರುಚಿಯಾಗಿರುತ್ತದೆ, ಇದು ಯಕೃತ್ತನ್ನು ನಿರ್ವಿಷಗೊಳಿಸುತ್ತದೆ. ಇದರಿಂದಾಗಿ ದೇಹವು ಆರೋಗ್ಯಕರವಾಗಿರುತ್ತದೆ.
4. ಕ್ಯಾರೆಟ್‌ನಲ್ಲಿ ಆಂಟಿ-ಆಕ್ಸಿಡೆಂಟ್‌ಗಳು ಹೇರಳ ಪ್ರಮಾಣದಲ್ಲಿ ಕಂಡುಬರುತ್ತವೆ, ಇದು ದೇಹವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ನಿಮ್ಮ ಆಹಾರದಲ್ಲಿ ಕ್ಯಾರೆಟ್ ಅನ್ನು ಹಲವು ವಿಧಗಳಲ್ಲಿ ನೀವು ಸೇರಿಸಿಕೊಳ್ಳಬಹುದು.
5. ಬೆಳ್ಳುಳ್ಳಿ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಏಕೆಂದರೆ ಬೆಳ್ಳುಳ್ಳಿ ಯಕೃತ್ತನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದಕ್ಕಾಗಿ ನೀವು ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸಬಹುದು. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)