Health Tips: ಬೇಸಿಗೆಯ ಬಿಸಿ ಗಾಳಿಯಿಂದ ಆರೋಗ್ಯ ಕಾಪಾಡಿಕೊಳ್ಳಲು ಈ ಸಲಹೆ ಪಾಲಿಸಿರಿ
ಬೇಸಿಗೆಯಲ್ಲಿ ಹೆಚ್ಚು ನೀರನ್ನು ಕುಡಿಯಿರಿ. ಮಜ್ಜಿಗೆ/ಎಳನೀರು, ಹಣ್ಣಿನ ಜ್ಯೂಸ್‌ಅನ್ನು ಹೆಚ್ಚಾಗಿ ಸೇವಿಸಿರಿ.
ನೀರಿನ ಅಂಶವಿರುವ ತರಕಾರಿಗಳು ಮತ್ತು ಹಣ್ಣುಗಳನ್ನು ಸೇವಿಸುವುದು ಉತ್ತಮ.
ಸಡಿಲವಾದ ತೆಳು ಬಣ್ಣದ ಕಾಟನ್ ಬಟ್ಟೆಗಳನ್ನು ಧರಿಸಬೇಕು. ಗಾಳಿಯಾಡುವ ಪಾದರಕ್ಷೆ ಧರಿಸುವುದು ಉತ್ತಮ.
ಹೊರಗಡೆ ತೆರಳುವಾಗ ಕೂಲಿಂಗ್ ಗ್ಲಾಸ್, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ರಕ್ಷಣೆ ಪಡೆಯಲು ಸಾಮಾನ್ಯ ಕ್ರಮಗಳನ್ನು ಪಾಲಿಸಿರಿ.
ರೆಡಿಯೋ, ದೂರದರ್ಶನ ಹಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನ ಮಾಹಿತಿಯನ್ನು ಪಡೆಯಿರಿ. ಅದರಂತೆ ನಿಮ್ಮ ದೈನಂದಿನ ಚಟುವಟಿಕೆಗಳನ್ನು ಪ್ಲ್ಯಾನ್ ಮಾಡಿಕೊಳ್ಳಿರಿ.