High Blood Pressure: ನೀವು ಕೂಡ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹೌದು ಎಂದಾದರೆ ನಿಮ್ಮ ಆಹಾರದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ಸೇರಿಸಬೇಕು. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ಯಾವ ಆಹಾರ ಸೇವಿಸಬೇಕು ಅನ್ನೋದರ ಬಗ್ಗೆ ತಿಳಿಯಿರಿ...
High Blood Pressure: ಕೆಟ್ಟ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದ ಇಂದು ಅನೇಕರಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚುತ್ತಿದೆ. ಕೇವಲ ಔಷಧಿಗಳ ಮೂಲಕ ನಿಮ್ಮ ಬಿಪಿಯನ್ನು ನಿಯಂತ್ರಿಸಬಹುದು ಎಂದು ನೀವು ಭಾವಿಸಿದರೆ, ಅದು ತಪ್ಪು. ರಕ್ತದೊತ್ತಡವನ್ನು ನಿಯಂತ್ರಿಸಲು ನಿಮ್ಮ ಆಹಾರ ಯೋಜನೆಯಲ್ಲಿ ಕೆಲವು ನೈಸರ್ಗಿಕ ಆಹಾರ ಪದಾರ್ಥಗಳನ್ನು ಸೇರಿಸಿಕೊಳ್ಳಬಹುದು. ಇಂತಹ ಕೆಲವು ಆಹಾರ ಪದಾರ್ಥಗಳ ಬಗ್ಗೆ ತಿಳಿಯಿರಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಅಧಿಕ ರಕ್ತದೊತ್ತಡವನ್ನು ʼಸೈಲೆಂಟ್ ಕಿಲ್ಲರ್ʼ ಎಂದು ಕರೆಯಲಾಗುತ್ತದೆ. ಅಧಿಕ ರಕ್ತದೊತ್ತಡ ಹೊಂದಿರುವ ಹೆಚ್ಚಿನ ಜನರಿಗೆ ಸಮಸ್ಯೆಯ ಬಗ್ಗೆ ತಿಳಿದಿರುವುದಿಲ್ಲ. ಅಧಿಕ ರಕ್ತದೊತ್ತಡ ಸಮಸ್ಯೆಗೆ ಕೆಲವು ಆಹಾರಗಳನ್ನು ನೀವು ಪ್ರತಿದಿನವೂ ಸೇವಿಸಬೇಕು. ಆ ಆಹಾರಗಳು ಯಾವುವು ಎಂದು ತಿಳಿಯಿರಿ..
ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು, ನಿಮ್ಮ ಆಹಾರದ ಯೋಜನೆಯನ್ನು ಪೌಷ್ಟಿಕ ಮತ್ತು ಸಮತೋಲಿತವಾಗಿರಬೇಕು. ನಿಮ್ಮ ದೈನಂದಿನ ಆಹಾರದಲ್ಲಿ ನೀವು ಹಣ್ಣುಗಳು, ತರಕಾರಿಗಳು, ಧಾನ್ಯಗಳು ಮತ್ತು ಕಡಿಮೆ ಕೊಬ್ಬಿನ ಡೈರಿ ಉತ್ಪನ್ನಗಳನ್ನು ಸೇರಿಸಬೇಕು. ಇದಲ್ಲದೆ ನಿಮ್ಮ ಆಹಾರದ ಭಾಗವಾಗಿ ನೀವು ಸೋಡಿಯಂ ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕು.
ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡಲು ಬಯಸಿದರೆ ನೀವು ಆವಕಾಡೊ, ಕಿವಿ ಮತ್ತು ಕಿತ್ತಳೆ ಹಣ್ಣು ಸೇವಿಸಬಹುದು. ಹಸಿರು ಎಲೆಗಳ ತರಕಾರಿಗಳು ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಸಹ ಸಹಾಯಕವೆಂದು ಸಾಬೀತುಪಡಿಸಬಹುದು.
ಒಣ ಹಣ್ಣುಗಳಾದ ಪಿಸ್ತಾ ಮತ್ತು ವಾಲ್ನಟ್ಸ್ ಕೂಡ ನಿಮ್ಮ ಬಿಪಿಯನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿ ಎಂದು ಸಾಬೀತುಪಡಿಸಬಹುದು. ನೀವು ಬಯಸಿದರೆ ನಿಮ್ಮ ಆಹಾರದಲ್ಲಿ ದಾಲ್ಚಿನ್ನಿ ಕೂಡ ಸೇರಿಸಿಕೊಳ್ಳಬಹುದು. ಇದಲ್ಲದೆ ನೀವು ಮಾಂಸಾಹಾರಿಗಳಾಗಿದ್ದರೆ, ಸೂಕ್ತವಾದ ಪ್ರಮಾಣದಲ್ಲಿ ಮೀನುಗಳನ್ನು ಸೇವಿಸಬಹುದು.
ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಸಮಯಕ್ಕೆ ನಿಯಂತ್ರಿಸುವುದು ಬಹಳ ಮುಖ್ಯ. ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸದಿದ್ದರೆ, ನೀವು ಪಾರ್ಶ್ವವಾಯು ಮತ್ತು ಹೃದಯಾಘಾತದಂತಹ ಗಂಭೀರ ಮತ್ತು ಮಾರಣಾಂತಿಕ ಕಾಯಿಲೆಗಳಿಗೆ ಗುರಿಯಾಗಬಹುದು. ಈ ಕಾರಣದಿಂದಲೇ ಅಧಿಕ ಬಿಪಿ ಸಮಸ್ಯೆಯನ್ನು ಹಗುರವಾಗಿ ಪರಿಗಣಿಸಬೇಡಿ ಎಂದು ಆರೋಗ್ಯ ತಜ್ಞರು ಆಗಾಗ್ಗೆ ಸಲಹೆ ನೀಡುತ್ತಾರೆ. (ಈ ಲೇಖನವು ಸಾಮಾನ್ಯ ಮಾಹಿತಿಗಾಗಿ, ದಯವಿಟ್ಟು ಯಾವುದೇ ಪರಿಹಾರವನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರನ್ನು ಸಂಪರ್ಕಿಸಿ)