Health Tips: ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದಿರಂದ ಇಷ್ಟೆಲ್ಲಾ ಪ್ರಯೋಜನಗಳಿವೆ
ಬೆಳ್ಳುಳ್ಳಿ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಕಡಿಮೆಯಾಗುತ್ತದೆ, ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.
ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಎಂಬ ಸಂಯುಕ್ತವು ರಕ್ತನಾಳಗಳನ್ನು ಹಿಗ್ಗಿಸುತ್ತದೆ. ಇದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ಬೆಳ್ಳುಳ್ಳಿ ಮಧುಮೇಹಿಗಳ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಬೆಳ್ಳುಳ್ಳಿ ಜೀರ್ಣಕಾರಿ ರಸದ ಸ್ರವಿಸುವಿಕೆಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಅಜೀರ್ಣ ಮತ್ತು ಮಲಬದ್ಧತೆ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.
ಬೆಳ್ಳುಳ್ಳಿಯಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ. ಬೆಳ್ಳುಳ್ಳಿ ದೇಹದ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ.