Health Tips: ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಕಬ್ಬಿನ ಜ್ಯೂಸ್ ಸೇವಿಸಬೇಡಿ
ನಿದ್ರಾಹೀನತೆಯಿಂದ ಬಳಲುತ್ತಿರುವವರು ಕಬ್ಬಿನ ಜ್ಯೂಸ್ ಸೇವಿಸಬಾರದು. ಇದರಲ್ಲಿರುವ ಪೋಲಿಕೋಸನಾಲ್ ನಿದ್ರೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಈ ಕಾರಣದಿಂದ ನಿದ್ರಾಹೀನತೆ ಮತ್ತು ಒತ್ತಡದ ಸಮಸ್ಯೆಗಳನ್ನು ಎದುರಿಸಬಹುದು.
ಮಧುಮೇಹ ಇರುವವರು ಕಬ್ಬಿನ ಜ್ಯೂಸ್ ಕುಡಿಯಬಾರದು. ಇದು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತದೆ. ಈ ಕಾರಣದಿಂದ ಇದು ರಕ್ತದಲ್ಲಿನ ಸಕ್ಕರೆಯ ಮೇಲೆ ಪರಿಣಾಮ ಬೀರುತ್ತದೆ. ಕಬ್ಬಿನ ರಸದಲ್ಲಿ ಸಕ್ಕರೆ ಅಂಶ ಹೆಚ್ಚಾಗಿರುತ್ತದೆ. 240 ಮಿಲಿ ಕಬ್ಬಿನ ರಸದಲ್ಲಿ ಸುಮಾರು 50 ಗ್ರಾಂ ಸಕ್ಕರೆ ಇರುತ್ತದೆ. ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ವೇಗವಾಗಿ ಹೆಚ್ಚುತ್ತದೆ.
ಅಧಿಕ ತೂಕದಿಂದ ಬಳಲುತ್ತಿರುವವರು ಕಬ್ಬಿನ ರಸವನ್ನು ಕುಡಿಯಬಾರದು. ಇದು ಹೆಚ್ಚಿನ ಕ್ಯಾಲೋರಿ ಅಂಶವನ್ನು ಹೊಂದಿದ್ದು, ಇದರ ಸೇವನೆಯಿಂದ ತೂಕ ಹೆಚ್ಚಾಗಬಹುದು. ಹೆಚ್ಚಿನ ಸಕ್ಕರೆ ಅಂಶದಿಂದ ದೇಹದ ಕೊಬ್ಬು ಕೂಡ ಹೆಚ್ಚಾಗುತ್ತದೆ. ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ಕಬ್ಬಿನ ರಸವನ್ನು ಕುಡಿಯಲೇಬಾರದು.
ಅಜೀರ್ಣ ಸಮಸ್ಯೆಯನ್ನು ಹೊಂದಿರುವವರು ಕಬ್ಬಿನ ರಸವನ್ನು ಸೇವಿಸಬಾರದು. ಇದರಲ್ಲಿರುವ ಪೋಲಿಕೋಸನಾಲ್ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆನೋವು, ವಾಂತಿ, ಭೇದಿ ಮುಂತಾದ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.
ಶೀತ & ಕೆಮ್ಮು ಇರುವವರು ಸಹ ಕಬ್ಬಿನ ರಸವನ್ನು ಕುಡಿಯಬಾರದು. ಇದರ ಸೇವನೆಯಿಂದ ನೆಗಡಿ ಮತ್ತು ಕೆಮ್ಮಿನ ಸಮಸ್ಯೆ ಮತ್ತಷ್ಟು ಹೆಚ್ಚುತ್ತದೆ. ಇದನ್ನು ಸೇವಿಸುವುದರಿಂದ ಗಂಟಲು ನೋವು ಮತ್ತು ತಲೆನೋವು ಕೂಡ ಬರುತ್ತದೆ.