Health benefits of peas: ಹಸಿರು ಬಟಾಣಿ ಜೀರ್ಣಕ್ರಿಯೆಗೆ ಉತ್ತಮವೆಂದು ಪರಿಗಣಿಸಲಾಗಿದೆ. ಬಟಾಣಿಯಲ್ಲಿರುವ ನಾರಿನಂಶ ಜೀರ್ಣಾಂಗ ವ್ಯವಸ್ಥೆ ಸುಧಾರಿಸಲು ಸಹಾಯ ಮಾಡುತ್ತದೆ. ಇದು ಕರುಳು ಮತ್ತು ಹೊಟ್ಟೆಗೆ ಉತ್ತಮವೆಂದು ಪರಿಗಣಿಸಲಾಗುತ್ತದೆ.
Top health benefits of peas: ನಿಯಮಿತವಾಗಿ ಹಸಿರು ಬಟಾಣಿ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯುತ್ತೀರಿ. ಬಟಾಣಿ ಕಾಳು ಆರೋಗ್ಯದ ನಿಧಿ ಎಂದೇ ಜನಪ್ರಿಯವಾಗಿದೆ. ಪ್ರತಿದಿನವೂ ಸ್ವಲ್ಪ ಪ್ರಮಾಣದಲ್ಲಿ ಬಟಾಣಿ ಸೇವನೆಯಿಂದ ಹಲವಾರು ಕಾಯಿಲೆಗಳಿಂದ ನೀವು ದೂರವಿರಬಹುದು. ಹಸಿರು ಬಟಾಣಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಹಸಿರು ಬಟಾಣಿ ಜೀರ್ಣಕ್ರಿಯೆಗೆ ಉತ್ತಮವೆಂದು ಪರಿಗಣಿಸಲಾಗಿದೆ. ಬಟಾಣಿಯಲ್ಲಿರುವ ನಾರಿನಂಶ ಜೀರ್ಣಾಂಗ ವ್ಯವಸ್ಥೆ ಸುಧಾರಿಸಲು ಸಹಾಯ ಮಾಡುತ್ತದೆ. ಇದು ಕರುಳು ಮತ್ತು ಹೊಟ್ಟೆಗೆ ಉತ್ತಮವೆಂದು ಪರಿಗಣಿಸಲಾಗುತ್ತದೆ. ಬಟಾಣಿ ಸೇವನೆಯಿಂದ ನೀವು ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆಯಿಂದ ಮುಕ್ತಿ ಹೊಂದುತ್ತೀರಿ.
ಫೈಬರ್ ಸಮೃದ್ಧವಾಗಿರುವ ಹಸಿರು ಬಟಾಣಿ ತೂಕ ನಷ್ಟಕ್ಕೆ ಪ್ರಯೋಜನಕಾರಿ. ಬಟಾಣಿ ಕಾಳುಗಳಲ್ಲಿ ಕ್ಯಾಲೊರಿ ಪ್ರಮಾಣ ತುಂಬಾ ಕಡಿಮೆಯಿದೆ. ಇದರ ಸೇವನೆಯಿಂದ ತುಂಬಾ ಹೊತ್ತು ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇದರಿಂದ ನಾವು ಅತಿಯಾಗಿ ತಿನ್ನುವುದನ್ನು ತಪ್ಪಿಸಬಹುದು ಮತ್ತು ತೂಕವನ್ನು ಸುಲಭವಾಗಿ ನಿಯಂತ್ರಿಸಬಹುದು.
ತರಕಾರಿಗಳಿಗೆ ಹೋಲಿಸಿದರೆ ಬಟಾಣಿ ಕಡಿಮೆ ಗ್ಲೈಸೆಮಿಕ್ ಸೂಚ್ಯಾಂಕವನ್ನು ಹೊಂದಿವೆ. ಇದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುವುದಿಲ್ಲ. ಬಟಾಣಿಯಲ್ಲಿ ನಾರಿನಂಶ ಹೇರಳವಾಗಿದ್ದು, ಪ್ರೋಟೀನ್ ಕೊರತೆಯನ್ನು ಇದು ನೀಗಿಸುತ್ತದೆ. ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಇದು ಉತ್ತಮ ಆಯ್ಕೆಯಾಗಿದೆ.
ಬಟಾಣಿಯಲ್ಲಿ ಹಲವಾರು ಉತ್ತಮ ಪೋಷಕಾಂಶಗಳುದ್ದು, ಇವು ತ್ವಚೆಯ ಆರೋಗ್ಯಕ್ಕೆ ಸಹಕಾರಿಯಾಗಿವೆ. ಬಟಾಣಿ ಕಾಳು B6, ವಿಟಮಿನ್ C ಮತ್ತು ಫೋಲಿಕ್ ಆಮ್ಲವನ್ನು ಹೊಂದಿದೆ. ಈ ಎಲ್ಲಾ ಪೋಷಕಾಂಶಗಳು ಉರಿಯೂತ ಕಡಿಮೆ ಮಾಡುತ್ತದೆ. ಇದು ಸ್ವತಂತ್ರ ರಾಡಿಕಲ್ಸ್ನಿಂದ ಚರ್ಮಕ್ಕೆ ಹಾನಿಯಾಗದಂತೆ ತಡೆಯುತ್ತದೆ.
ಬಟಾಣಿ ಕಾಳು ಪ್ರೋಟೀನ್ನ ಅತ್ಯುತ್ತಮ ಮೂಲವಾಗಿದೆ. ಬಟಾಣಿ ಕಾಳುಗಳಲ್ಲಿ ನಾರಿನ ಪ್ರಮಾಣವೂ ಉತ್ತಮವಾಗಿದೆ. ಬಟಾಣಿ ಕಾಳು ತಿನ್ನುವುದರಿಂದ ಸಾಕಷ್ಟು ಪ್ರೊಟೀನ್ ಸಿಗುತ್ತದೆ. ನಿಯಮಿತವಾಗಿ ಇದನ್ನು ಸೇವಿಸುವುದರಿಂದ ನೀವು ದೇಹದ ಒಟ್ಟಾರೆ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬಹುದು.
ಬಟಾಣಿ ತಿನ್ನುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿ ಇರುತ್ತದೆ. ಬಟಾಣಿಯಲ್ಲಿ ನಿಯಾಸಿನ್ ಎಂಬ ಅಂಶ ಹೇರಳವಾಗಿದ್ದು, ಈ ಅಂಶವು ಟ್ರೈಗ್ಲಿಸರೈಡ್ಗಳ ರಚನೆ ತಡೆಯುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಮೂಲಕ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಿಸಲು ಬಟಾಣಿ ಸಹಕಾರಿಯಾಗಿದೆ.