Health Tips: ಹಸಿರು ಬಟಾಣಿ ಸೇವಿಸಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ
ಹಸಿರು ಬಟಾಣಿ ಜೀರ್ಣಕ್ರಿಯೆಗೆ ಉತ್ತಮವೆಂದು ಪರಿಗಣಿಸಲಾಗಿದೆ. ಬಟಾಣಿಯಲ್ಲಿರುವ ನಾರಿನಂಶ ಜೀರ್ಣಾಂಗ ವ್ಯವಸ್ಥೆ ಸುಧಾರಿಸಲು ಸಹಾಯ ಮಾಡುತ್ತದೆ. ಇದು ಕರುಳು ಮತ್ತು ಹೊಟ್ಟೆಗೆ ಉತ್ತಮವೆಂದು ಪರಿಗಣಿಸಲಾಗುತ್ತದೆ. ಬಟಾಣಿ ಸೇವನೆಯಿಂದ ನೀವು ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆಯಿಂದ ಮುಕ್ತಿ ಹೊಂದುತ್ತೀರಿ.
ಫೈಬರ್ ಸಮೃದ್ಧವಾಗಿರುವ ಹಸಿರು ಬಟಾಣಿ ತೂಕ ನಷ್ಟಕ್ಕೆ ಪ್ರಯೋಜನಕಾರಿ. ಬಟಾಣಿ ಕಾಳುಗಳಲ್ಲಿ ಕ್ಯಾಲೊರಿ ಪ್ರಮಾಣ ತುಂಬಾ ಕಡಿಮೆಯಿದೆ. ಇದರ ಸೇವನೆಯಿಂದ ತುಂಬಾ ಹೊತ್ತು ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇದರಿಂದ ನಾವು ಅತಿಯಾಗಿ ತಿನ್ನುವುದನ್ನು ತಪ್ಪಿಸಬಹುದು ಮತ್ತು ತೂಕವನ್ನು ಸುಲಭವಾಗಿ ನಿಯಂತ್ರಿಸಬಹುದು.
ತರಕಾರಿಗಳಿಗೆ ಹೋಲಿಸಿದರೆ ಬಟಾಣಿ ಕಡಿಮೆ ಗ್ಲೈಸೆಮಿಕ್ ಸೂಚ್ಯಾಂಕವನ್ನು ಹೊಂದಿವೆ. ಇದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುವುದಿಲ್ಲ. ಬಟಾಣಿಯಲ್ಲಿ ನಾರಿನಂಶ ಹೇರಳವಾಗಿದ್ದು, ಪ್ರೋಟೀನ್ ಕೊರತೆಯನ್ನು ಇದು ನೀಗಿಸುತ್ತದೆ. ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಇದು ಉತ್ತಮ ಆಯ್ಕೆಯಾಗಿದೆ.
ಬಟಾಣಿಯಲ್ಲಿ ಹಲವಾರು ಉತ್ತಮ ಪೋಷಕಾಂಶಗಳುದ್ದು, ಇವು ತ್ವಚೆಯ ಆರೋಗ್ಯಕ್ಕೆ ಸಹಕಾರಿಯಾಗಿವೆ. ಬಟಾಣಿ ಕಾಳು B6, ವಿಟಮಿನ್ C ಮತ್ತು ಫೋಲಿಕ್ ಆಮ್ಲವನ್ನು ಹೊಂದಿದೆ. ಈ ಎಲ್ಲಾ ಪೋಷಕಾಂಶಗಳು ಉರಿಯೂತ ಕಡಿಮೆ ಮಾಡುತ್ತದೆ. ಇದು ಸ್ವತಂತ್ರ ರಾಡಿಕಲ್ಸ್‌ನಿಂದ ಚರ್ಮಕ್ಕೆ ಹಾನಿಯಾಗದಂತೆ ತಡೆಯುತ್ತದೆ.
ಬಟಾಣಿ ಕಾಳು ಪ್ರೋಟೀನ್‌ನ ಅತ್ಯುತ್ತಮ ಮೂಲವಾಗಿದೆ. ಬಟಾಣಿ ಕಾಳುಗಳಲ್ಲಿ ನಾರಿನ ಪ್ರಮಾಣವೂ ಉತ್ತಮವಾಗಿದೆ. ಬಟಾಣಿ ಕಾಳು ತಿನ್ನುವುದರಿಂದ ಸಾಕಷ್ಟು ಪ್ರೊಟೀನ್ ಸಿಗುತ್ತದೆ. ನಿಯಮಿತವಾಗಿ ಇದನ್ನು ಸೇವಿಸುವುದರಿಂದ ನೀವು ದೇಹದ ಒಟ್ಟಾರೆ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬಹುದು.
ಬಟಾಣಿ ತಿನ್ನುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿ ಇರುತ್ತದೆ. ಬಟಾಣಿಯಲ್ಲಿ ನಿಯಾಸಿನ್ ಎಂಬ ಅಂಶ ಹೇರಳವಾಗಿದ್ದು, ಈ ಅಂಶವು ಟ್ರೈಗ್ಲಿಸರೈಡ್‌ಗಳ ರಚನೆ ತಡೆಯುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಮೂಲಕ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಿಸಲು ಬಟಾಣಿ ಸಹಕಾರಿಯಾಗಿದೆ.