Benefits of Carrots: ಸಕ್ಕರೆ ಕಾಯಿಲೆ ಸಮಸ್ಯೆಗೆ ಕ್ಯಾರೆಟ್ ರಾಮಬಾಣ
ಕ್ಯಾರೆಟ್ ಕಡಿಮೆ ಸಿಹಿ ಸೂಚ್ಯಂಕವನ್ನು ಹೊಂದಿದ್ದು, ಇದರ ಸೇವನೆಯಿಂದ ಬ್ಲಡ್ ಶುಗರ್ ಲೆವೆಲ್ ಹೆಚ್ಚಾಗುವುದಿಲ್ಲ. ಹೀಗಾಗಿ ಸಕ್ಕರೆ ಕಾಯಿಲೆ ಇರುವವರಿಗೆ ಇದೊಂದು ಸುರಕ್ಷಿತ ಆಹಾರವಾಗಿದೆ ಎಂದು ಹೇಳಬಹುದು. ಇದರಲ್ಲಿ ನಾರಿನಂಶ ಹೆಚ್ಚಾಗಿದ್ದು, ಸಿಹಿ ಸೂಚ್ಯಂಕ ಕಡಿಮೆ ಇರುವುದರಿಂದ ನಮ್ಮ ಬ್ಲಡ್ ಶುಗರ್ ಲೆವೆಲ್ ನಿಯಂತ್ರಣದಲ್ಲಿರುತ್ತದೆ.
ಕ್ಯಾರೆಟ್ ಅಪಾರ ನಾರಿನ ಅಂಶವನ್ನು ಒಳಗೊಂಡಿದ್ದು, ನಮ್ಮ ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ. ರಕ್ತದಲ್ಲಿ ಸಕ್ಕರೆ ಪ್ರಮಾಣ ಹೀರಿಕೊಳ್ಳುವುದನ್ನು ನಿಧಾನ ಮಾಡುತ್ತದೆ. ಇದರಿಂದ ಸಮತೋಲನದ ಬ್ಲಡ್ ಶುಗರ್ ಲೆವೆಲ್ ನಿಮ್ಮದಾಗುತ್ತದೆ.
ಕ್ಯಾರೆಟ್ ಅಪಾರ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳಗೊಂಡಿದ್ದು, ವಿಟಮಿನ್ A, ವಿಟಮಿನ್ K, ಪೊಟ್ಯಾಶಿಯಂ ಮತ್ತು ಮೆಗ್ನೀಷಿಯಂನಿಂದ ಸಮೃದ್ಧವಾಗಿದೆ. ನಮ್ಮ ಸಂಪೂರ್ಣ ಆರೋಗ್ಯಕ್ಕೆ ಈ ಪೌಷ್ಟಿಕಾಂಶಗಳು ಅಗತ್ಯವಾಗಿ ಬೇಕಾಗುತ್ತವೆ. ಇವು ಮಧುಮೇಹ ನಿರ್ವಹಣೆಯಲ್ಲಿ ಸಾಕಷ್ಟು ನೆರವಾಗುತ್ತವೆ.
ಆಂಟಿ ಆಕ್ಸಿಡೆಂಟ್ ಅಂಶಗಳಿಂದ ಸಮೃದ್ಧವಾಗಿರುವ ಕ್ಯಾರೆಟ್ ಸೇವನೆ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ನಮ್ಮ ಜೀವಕೋಶಗಳಿಗೆ ಹಾನಿಯಾಗುವುದಿಲ್ಲ. ಉರಿಯುತ ಕೂಡ ಕಡಿಮೆ ಆಗುತ್ತದೆ. ಮಧುಮೇಹ ಸಂಬಂಧಿತ ಜನರಿಗೆ ಇದು ಹೆಚ್ಚು ಸಹಕಾರಿಯಾಗಿದೆ.
ಕ್ಯಾರೆಟ್‍ನಲ್ಲಿ ಹೆಚ್ಚಾಗಿರುವ ನಾರಿನಂಶವು ನಮ್ಮ ದೇಹದ ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ. ಕಾರ್ಬೋಹೈಡ್ರೇಟ್ಸ್ ಅಂಶಗಳನ್ನು ನಿಧಾನವಾಗಿ ಜೀರ್ಣ ಮಾಡಿ ರಕ್ತದ ಹರಿವಿಗೆ ಸಹಕಾರಿಯಾಗಿವೆ. ಇದರಿಂದ ನಮ್ಮ ಬ್ಲಡ್ ಶುಗರ್ ಲೆವೆಲ್ ನಿಧಾನವಾಗಿ ಏರಿಕೆಯಾಗುತ್ತದೆ. ಹೀಗಾಗಿ ಸಕ್ಕರೆ ಕಾಯಿಲೆ ಇರುವವರಿಗೆ ಇದು ತುಂಬಾ ಉತ್ತಮವಾಗಿದೆ.