ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ತುಂಬಾ ಲಾಭದಾಯಕ ಈ ಐದು ಜ್ಯೂಸ್
ಬದಲಾಗುತ್ತಿರುವ ಜೀವನಶೈಲಿ, ಕಳಪೆ ಆಹಾರಪದ್ದತಿಯು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಪ್ರಮುಖ ಕಾರಣ. ಆದರೆ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಪ್ರಯತ್ನಿಸದಿದ್ದರೆ ಭವಿಷ್ಯದಲ್ಲಿ ದೇಹವು ಖಾಯಿಲೆಗಳ ಉಗ್ರಾಣವಾಗಬಹುದು. ಆರೋಗ್ಯ ತಜ್ಞರ ಪ್ರಕಾರ, ನಿತ್ಯ ಕೆಲವು ಜ್ಯೂಸ್'ಗಳನ್ನು ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ನಿಯಂತ್ರಿಸಬಹುದು. ಅವುಗಳೆಂದರೆ...
ಭಾರತದ ಪ್ರಸಿದ್ಧ ಪೌಷ್ಟಿಕತಜ್ಞ ನಿಖಿಲ್ ವಾಟ್ಸ್ ಅವರ ಪ್ರಕಾರ, ಪ್ರತಿ ದಿನ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್ ಕುಡಿಯುದರಿಂದ ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು.
ಪ್ರತಿ ಮನೆಯಲ್ಲೂ ಸುಲಭವಾಗಿ ಲಭ್ಯವಿರುವ ಟೊಮಾಟೊವನ್ನು ಜ್ಯೂಸ್ ತಯಾರಿಸಿ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್‌ನ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಿಸಬಹುದು.
ಸಾಮಾನ್ಯವಾಗಿ ತೂಕ ಇಳಿಕೆಗಾಗಿ ಹೆಚ್ಚು ಪ್ರಸಿದ್ದಿಯಾಗಿರುವ ಚಿಯಾ ಸೀಡ್ಸ್ ಪಾನೀಯವನ್ನು ಪ್ರತಿ ದಿನ ಕುಡಿಯುವುದರಿಂದ ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು.
ಪ್ರತಿದಿನ ಬೆಳಿಗ್ಗೆ ಉಪಾಹಾರದೊಂದಿಗೆ ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ರಕ್ತಹೀನತೆ ಸಮಸ್ಯೆಯಿಂದ ಪರಿಹಾರ ದೊರೆಯುವುದರೊಂದಿಗೆ, ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಕೂಡ ತುಂಬಾ ಪ್ರಯೋಜನಕಾರಿ ಆಗಿದೆ.
ಪ್ರತಿ ದಿನ ಒಂದು ಲೋಟ ಕಿತ್ತಳೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಕೊಲೆಸ್ಟ್ರಾಲ್ ಕಡಿಮೆ ಆಗುವುದರ ಜೊತೆಗೆ ಕಣ್ಣಿನ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಆಗಿದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.