Heart Health: ಹೃದ್ರೋಗಿಗಳು ಅಪ್ಪಿತಪ್ಪಿಯೂ ಈ ಆಹಾರಗಳನ್ನು ತಿನ್ನಲೇಬಾರದು
ಹೃದಯದ ಆರೋಗ್ಯ: ಆರೋಗ್ಯ ತಜ್ಞರ ಪ್ರಕಾರ, ಕೆಲವು ಆಹಾರಗಳ ಬಳಕೆಯು ಹೃದ್ರೋಗಿಗಳಿಗೆ ತುಂಬಾ ಅಪಾಯಕಾರಿ ಎಂದು ಹೇಳಲಾಗುತ್ತದೆ. ಅಂತಹ ಐದು ಪ್ರಮುಖ ಆಹಾರಗಳೆಂದರೆ...
ಕರಿದ ಆಹಾರಗಳು: ತಜ್ಞರ ಪ್ರಕಾರ, ಹೃದಯ ಸಂಬಂಧಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ಎಣ್ಣೆಯಲ್ಲಿ ಕರಿದ ಆಹಾರಗಳ ಸೇವಣೆಯಿಂದ ದೂರ ಉಳಿಯಬೇಕು. ಇಂತಹ ಆಹಾರಗಳನ್ನು ಸೇವಿಸುವುದರಿಂದ ಇದು ದೇಹದಲ್ಲಿ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವ ಮೂಲಕ ಹೃದಯದ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮವನ್ನು ಉಂಟು ಮಾಡಬಹುದು.
ಐಸ್ ಕ್ರೀಂ: ಐಸ್ ಕ್ರೀಂ ಹೆಸರು ಕೇಳಿದರೆ ಸಾಕು ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಬಲು ಪ್ರಿಯವಾಗುವ ಆಹಾರ. ಆದರೆ, ಇದು ಹೃದಯ ರೋಗಿಗಳಿಗೆ ತುಂಬಾ ಹಾನಿಕಾರಕವಾಗಿದೆ.
ಸಕ್ಕರೆ: ಸಕ್ಕರೆ/ಸಿಹಿ ಪದಾರ್ಥಗಳು ಕೂಡ ಹೃದ್ರೋಗಿಗಳಿಗೆ ತುಂಬಾ ಅಪಾಯಕಾರಿ. ಹಾಗಾಗಿ, ಹೃದಯ ಸಂಬಂಧಿತ ಸಮಸ್ಯೆಗಳನ್ನು ಹೊಂದಿರುವವರು ಸಿಹಿ ಪದಾರ್ಥಗ್ಲೈಂದ ಅಂತರ ಕಾಯ್ದುಕೊಳ್ಳಿ.
ಉಪ್ಪು: ತಜ್ಞರ ಪ್ರಕಾರ, ಹೃದ್ರೋಗದ ಸಮಸ್ಯೆ ಹೊಂದಿರುವವರು ತಮ್ಮ ಆಹಾರದಲ್ಲಿ ಉಪ್ಪಿನ ಪ್ರಮಾಣವನ್ನು ಕಡಿಮೆ ಮಾಡಬೇಕು.
ಜಂಕ್ ಫುಡ್: ಹೃದ್ರೋಗ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಕೂಡ ಜಂಕ್ ಫುಡ್ ಗಳನ್ನು ತಿನ್ನಬಾರದು ಎಂದು ಹೇಳಲಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.