Karnataka Rains: ಕರ್ನಾಟಕಕ್ಕೆ ಜಲ ಕಂಟಕ.. ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ, ಬಿರುಗಾಳಿ ಗುಡುಗು ಮಿಂಚು ಸಹಿತ ವರುಣಾರ್ಭಟದ ಎಚ್ಚರಿಕೆ!
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಮಳೆಯ ಆರ್ಭಟಕ್ಕೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಮುಂದಿನ ಎರಡು ದಿನಗಳ ಕಾಲ ಮತ್ತೆ ವರುಣ ಅಬ್ಬರಿಸಲಿದ್ದಾನೆ.
ಧಾರವಾಡ, ಚಾಮರಾಜನಗರ, ಕಲಬುರಗಿ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎದಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದ್ದು, ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.