ದಕ್ಷಿಣ ಭಾರತದ ಈ ಭಾಗಗಳಲ್ಲಿ ಮುಂದಿನ 5 ದಿನ ಕುಂಭದ್ರೋಣ ಮಳೆ! ಗುಡುಗು ಸಹಿತ ಬಲವಾದ ಗಾಳಿ ಬೀಸುವ ಮುನ್ನೆಚ್ಚರಿಕೆ
ನವೆಂಬರ್ 26 ರ ಸುಮಾರಿಗೆ ದಕ್ಷಿಣ ಅಂಡಮಾನ್ ಸಮುದ್ರ ಮತ್ತು ನೆರೆಹೊರೆಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ನವೆಂಬರ್ 27 ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರಕ್ಕೆ ಇದರ ಪ್ರಭಾವ ವಿಸ್ತರಿಸುವ ಸಾಧ್ಯತೆಯಿದೆ.
ಇನ್ನೊಂದೆಡೆ ನವೆಂಬರ್ 24ರಿಂದ 27 ರ ಅವಧಿಯಲ್ಲಿ ಉತ್ತರ ಮಧ್ಯ ಮಹಾರಾಷ್ಟ್ರ, ಉತ್ತರ ಕೊಂಕಣ, ಗುಜರಾತ್, ನೈಋತ್ಯ ಮಧ್ಯಪ್ರದೇಶ ಮತ್ತು ದಕ್ಷಿಣ ರಾಜಸ್ಥಾನದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಗುಡುಗು ಮತ್ತು ಮಿಂಚುಗಳೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ದಕ್ಷಿಣ ಭಾರತದ ವಿವರವನ್ನು ಗಮನಿಸಿದರೆ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕದ ದಕ್ಷಿಣ ಒಳಭಾಗ ಮತ್ತು ಕೇರಳ-ಮಾಹೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ನವೆಂಬರ್ 24ರಿಂದ 27ರವರೆಗೆ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ತೆಲಂಗಾಣ ಮತ್ತು ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗಲಿದೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್ ಮೇಲೆ ಪ್ರತ್ಯೇಕ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ.
ಅಂಡಮಾನ್-ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಒಡಿಶಾ, ಕೊಂಕಣ-ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆ ಮುನ್ಸೂಚನೆ ಇದೆ.
ಒಡಿಶಾ, ಗುಜರಾತ್, ಮಧ್ಯ ಮಹಾರಾಷ್ಟ್ರ, ಮರಾಠವಾಡ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆಯ ಮುನ್ಸೂಚನೆ ಇದೆ.