ಮುಂದಿನ 3 ದಿನ ಈ ಭಾಗಗಳಲ್ಲಿ ಧಾರಾಕಾರ ಮಳೆ: ಜಲಪ್ರಳಯದ ಎಚ್ಚರಿಕೆ ಜೊತೆ ಗುಡುಗು-ಮಿಂಚಿನ ಭೀತಿ
ಅರೇಬಿಯನ್ ಸಮುದ್ರದಲ್ಲಿರುವ ಚಂಡಮಾರುತದ ಪರಿಚಲನೆಯು ತಮಿಳುನಾಡು, ಕರ್ನಾಟಕದ ದಕ್ಷಿಣ ಭಾಗಕ್ಕೆ ಬೀಳುತ್ತಿದ್ದರೆ, ಲಕ್ಷದ್ವೀಪ ಪ್ರದೇಶ ಮತ್ತು ಪಕ್ಕದ ಆಗ್ನೇಯ ಅರಬ್ಬಿ ಸಮುದ್ರದ ಪ್ರಭಾವ ಕೇರಳದ ಕರಾವಳಿ ಭಾಗದ ಮೇಲೆ ಇರಲಿದೆ.
ಈ ಪ್ರಭಾವದ ಹಿನ್ನೆಲೆಯಲ್ಲಿ ಅಕ್ಟೋಬರ್ 17ರ ಸುಮಾರಿಗೆ ಆಗ್ನೇಯ ಮತ್ತು ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಇದು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಗಾಳಿ ಮಳೆ ಬೀಳುವ ಮುನ್ಸೂಚನೆ ಇದೆ.
ಅಕ್ಟೋಬರ್ 16ರಿಂದ 17ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆ, ಗುಡುಗು, ಬಿರುಗಾಳಿ (30-40 ಕಿ.ಮೀ.) ಮತ್ತು ಮಿಂಚಿನ ಮುನ್ಸೂಚನೆ ಇದೆ.
ಇನ್ನು ಈ ಚಂಡಮಾರುತ ಪ್ರಭಾವದಿಂದ ಕರ್ನಾಟಕದ ಕರಾವಳಿ ಪ್ರದೇಶಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ದಿನವಿಡೀ ಮಳೆ ಸುರಿಯುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ತುಂತುರು ಮಳೆ ಆಗಲಿದೆ.
ಮುಂದಿನ ಎರಡು ದಿನಗಳ ಬಳಿಕ ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಮತ್ತೆ ಕಡಿಮೆಯಾಗಲಿದೆ. ಆದರೆ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗಲಿದೆ.