ಕಪ್ಪು ಎಳ್ಳು ಸೇವನೆಯಿಂದ ಆರೋಗ್ಯಕ್ಕಿದೆ ಈ 5 ಅದ್ಭುತ ಪ್ರಯೋಜನಗಳು
ಕಪ್ಪು ಎಳ್ಳಿನಲ್ಲಿ ಕ್ಯಾಲ್ಸಿಯಂ, ಫೈಬರ್, ಕಬ್ಬಿಣ, ರಂಜಕ ಸೇರಿದಂತೆ ಹಲವು ಪೋಷಕಾಂಶಗಳು ಹೇರಳವಾಗಿ ಕಂಡು ಬರುತ್ತದೆ. ಕಪ್ಪೆಳ್ಳು ತಿನ್ನುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ. ಅವುಗಳೆಂದರೆ...
ಕಪ್ಪೆಳ್ಳಿನಲ್ಲಿ ಬಹುಅಪರ್ಯಾಪ್ತ ಕೊಬ್ಬುಗಳು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಾಗಿ ಕಂಡು ಬರುತ್ತದೆ. ಇದನ್ನು ಸೇವಿಸುವುದರಿಂದ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತಿದೆ.
ಕಪ್ಪು ಎಳ್ಳಿನಲ್ಲಿ ಫೈಬರ್ ಸಮೃದ್ಧವಾಗಿದೆ. ಹಾಗಾಗಿ ಕಪ್ಪೆಳ್ಳು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ.
ಕಪ್ಪು ಎಳ್ಳಿನಲ್ಲಿ ಕಂಡು ಬರುವ ಪೋಷಕಾಂಶಗಳು, ಉತ್ಕರ್ಷಣ ನಿರೋಧಕಗಳು ಯಕೃತ್ ಅನ್ನು ಆರೋಗ್ಯಕರವಾಗಿರಿಸುವಲ್ಲಿ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಕಪ್ಪು ಎಳ್ಳಿನಲ್ಲಿ ಸಾಕಷ್ಟು ಪ್ರಮಾಣದ ಕ್ಯಾಲ್ಸಿಯಂ ಕಂಡು ಬರುತ್ತದೆ. ಇದು ಮೂಳೆಗಳನ್ನು ಬಲಿಷ್ಠಗೊಳಿಸುವಲ್ಲಿ ತುಂಬಾ ಪ್ರಯೋಜನಕಾರಿ ಆಗಿದೆ.
ಕಪ್ಪು ಎಳ್ಳಿನಲ್ಲಿ ಕಂಡುಬರುವ ಪೋಷಕಾಂಶಗಳು, ಉತ್ಕರ್ಷಣ ನಿರೋಧಕಗಳು ರಕ್ತವನ್ನು ಶುದ್ಧೀಕರಿಸಲು ತುಂಬಾ ಸಹಕಾರಿಯಾಗಿವೆ ಎನ್ನಲಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.