ಯೂರಿಕ್ ಆಸಿಡ್ ರೋಗಿಗಳ ಮೂಳೆಗಳು ದುರ್ಬಲವಾಗಿರುತ್ತವೆ. ಸೌತೆಕಾಯಿಯಲ್ಲಿ ಕ್ಯಾಲ್ಸಿಯಂ ಹೇರಳವಾಗಿ ಕಂಡುಬರುತ್ತದೆ. ಇದು ಮೂಳೆ ಸ್ನಾಯುಗಳನ್ನು ಸರಿಪಡಿಸಲು ಸಹ ಸಹಾಯ ಮಾಡುತ್ತದೆ.
ಸೌತೆಕಾಯಿಯಲ್ಲಿ ವಿಟಮಿನ್ ಸಿ ಮತ್ತು ನೀರು ಸಮೃದ್ಧವಾಗಿದೆ. ಇದು ದೇಹದಲ್ಲಿನ ಹಾನಿಗೊಳಗಾದ ಜೀವಕೋಶಗಳನ್ನು ಸರಿಪಡಿಸಲು ಸಹಾಯ ಮಾಡುತ್ತದೆ.
ದೀರ್ಘಕಾಲದವರೆಗೆ ಕೀಲುಗಳಲ್ಲಿ ಊತದಿಂದ ಬಳಲುತ್ತಿರುವವರಿಗೂ ಈ ತರಕಾರಿ ಪ್ರಯೋಜನಕಾರಿಯಾಗಿದೆ.
ಸೌತೆಕಾಯಿಯಲ್ಲಿನ ನೀರಿನ ಅಂಶದಿಂದಾಗಿ ದೇಹದಿಂದ ವಿಷಕಾರಿ ವಸ್ತುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದರಿಂದ ಕಿಡ್ನಿ ಸ್ಟೋನ್‌ಗಳಂತಹ ಸಮಸ್ಯೆಯೂ ಕಡಿಮೆಯಾಗುತ್ತದೆ.
ಸೌತೆಕಾಯಿಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್‌ಗಳು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿಯಾಗಿದೆ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.