ಹೊಗೆನಕಲ್ ರುದ್ರ ನರ್ತನ: ಪ್ರವಾಸಿಗರಿಗೆ ನೋ ಎಂಟ್ರಿ

Fri, 19 Jul 2024-9:57 pm,

ಕರ್ನಾಟಕ, ತಮಿಳುನಾಡು ಎರಡೂ ರಾಜ್ಯದ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ಕೊಡುವ ಜನಪ್ರಿಯ ಜಲಪಾತ ಇದಾಗಿದ್ದು ಕಳೆದ 4 ದಿನದಿಂದ ತಮಿಳುನಾಡು ಭಾಗದಲ್ಲಿ ಬೋಟಿಂಗ್, ಪ್ರವಾಸಿಗರಿಗೆ ನಿರ್ಬಂಧ ಹೇರಿದೆ. ಜು.20 ರಿಂದ ಕರ್ನಾಟಕದ ಭಾಗದಲ್ಲೂ ಪ್ರವಾಸಿಗರಿಗೆ ನಿರ್ಬಂಧ ಇರಲಿದೆ.

ನೀರಿನ ಹರಿವು ಕಡಿಮೆಯಾಗುವ ತನಕ ಹೊಗೆನಕಲ್ ಗೆ ಪ್ರವಾಸಿಗರಿಗೆ ಪ್ರವೇಶ ಇರುವುದಿಲ್ಲ, ತಾತ್ಕಾಲಿಕ ನಿರ್ಬಂಧ ಇದ್ದು ಅದಾದ ಬಳಿಕ ಮುಂದಿನ ಕ್ರಮ‌ ಕೈಗೊಳ್ಳುತ್ತೇವೆ ಎಂದು ಹೊಗೆನಕಲ್ ಆರ್ ಎಫ್ ಒ ಸಂಪತ್ ಪಟೇಲ್ ತಿಳಿಸಿದ್ದಾರೆ.  

ಈಗಾಗಲೇ ಕಬಿನಿಯಿಂದ 70 ಸಾವಿರ ಕ್ಯೂಸೆಕ್ ಹೊರ ಹರಿವಿದ್ದು ಹೊಗೆನಕಲ್ ನಲ್ಲಿ  ಕಾವೇರಿ ರಭಸದಿಂದ ಹರಿಯುತ್ತಿದೆ. ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿರುವುದರಿಂದ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ‌

ಕಬಿನಿ ಹೊರಹರಿವು ಮತ್ತು ಜೋರು ಮಳೆಯಿಂದ ಹೊಗೆನಕಲ್ ಲ್ಲಿ ಕಾವೇರಿ ರೌದ್ರ ನರ್ತನ ಉಂಟಾಗಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಕಾವೇರಿ ವನ್ಯಜೀವಿಧಾಮವು ಜು.20 ರಿಂದ ಹೊಗೆನಕಲ್ ಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದೆ.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link