ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.. ಎಲ್ಲಾ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ ಮಾಡಿದ ಈ ರಾಜ್ಯ ಸರ್ಕಾರ: ಕಾರಣ ಏನು?
)
School Holiday announcement: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದಿದೆ. ಸರ್ಕಾರ ಶಾಲೆಗಳಿಗೆ ಎರಡು ದಿನ ರಜೆ ಘೋಷಿಸಿದೆ. ಇದಕ್ಕೆ ಕಾರಣ ಏನೆಂದು ತಿಳಿಯೋಣ...
)
ಫೆಬ್ರವರಿ 13 ಮತ್ತು 14 ರಂದು ಸರ್ಕಾರ ಶಾಲೆಗಳಿಗೆ ಎರಡು ದಿನ ರಜೆ ಘೋಷಿಸಿದೆ. ಏಷ್ಯಾದ ಅತಿ ದೊಡ್ಡ ಏರ್ ಶೋ ನಡೆಯಲಿದೆ. ಈ ಕಾರಣಕ್ಕೆ ಶಾಲೆಗೆ ರಜೆ ನೀಡಲಾಗಿದೆ.
)
ಏಷ್ಯಾದಲ್ಲೇ ಅತ್ಯಂತ ದೊಡ್ಡ ಏರ್ ಶೋ ‘ಏರೋ ಇಂಡಿಯಾ 2025’ ಬೆಂಗಳೂರಿನ ಯಲಹಂಕದಲ್ಲಿ ನಡೆಯಲಿದೆ.
ಯಲಹಂಕದ ಸುತ್ತಮುತ್ತಲಿನ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ನೀಡಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಶಿಕ್ಷಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.
ಯಲಹಂಕದ ಸುತ್ತಮುತ್ತಲಿನ ಪ್ರಥಮ ದರ್ಜೆ, ಖಾಸಗಿ ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳ ತರಗತಿಗಳನ್ನು ಸಹ ರದ್ದು ಮಾಡಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಸುತ್ತೋಲೆ ಹೊರಡಿಸಿದೆ.
15ನೇ ಆವೃತ್ತಿಯ ಏರ್ ಶೋ ನಡೆಯಲಿದ್ದು ಶೋ ವೀಕ್ಷಿಸಲು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯ ಸಾರ್ವಜನಿಕರು, ಗಣ್ಯರು ಆಗಮಿಸಲಿದ್ದಾರೆ.
ಏರ್ ಶೋ ಕಾರಣಕ್ಕೆ ಮುಂಜಾಗ್ರತೆಯ ಕ್ರಮವಾಗಿ Air Force Station, ಯಲಹಂಕದ ಸುತ್ತಮುತ್ತಲಿನ ಸರ್ಕಾರಿ ಪ್ರಥಮ ದರ್ಜೆ, ಖಾಸಗಿ ಅನುದಾನಿತ ಕಾಲೇಜುಗಳಿಗೆ ಸಹ ರಜೆ ನೀಡಬೇಕೆಂದು ಸೂಚನೆ ನೀಡಲಾಗಿದೆ.