ವಿವಿಧ ದಲಿತ ಪರ ಸಂಘಟನೆಯಿಂದ ಬಂದ್ ಗೆ ಕರೆ :ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.ಶಾ ಹೇಳಿಕೆ ಖಂಡಿಸಿ ದಲಿತ ಪರ ಸಂಘಟನೆಗಳು ಬೀದಿಗಿಳಿದಿವೆ.
ಅಮಿತ್ ಷಾ ಹೇಳಿಕೆಯಿಂದ ರೊಚ್ಚಿಗೆದ್ದಿರುವ ದಲಿತ ಪರ ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆ ಹಾದಿ ಹಿಡಿವೆ. ಅಲ್ಲದೆ ಬಂದ್ ಗೂ ಕರೆ ಕೊಟ್ಟಿವೆ. ನಿತ್ಯ ಒಂದಿಲ್ಲ ಒಂದು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸುತ್ತಿವೆ.
ವಿವಿಧ ದಲಿತ ಪರ ಸಂಘಟನೆಯಿಂದ ಇಂದು ಬೀದರ್ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬೀದರ್ ತಾಲೂಕಿನ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಬೀದರ್ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಲ್. ಪ್ರಸನ್ನ ಕುಮಾರ್ ಆದೇಶಿಸಿದ್ದಾರೆ.
ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿಯೂ ಬಂದ್ ಗೆ ಕರೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜ್ ಗಳಿಗೆ ರಜೆ ನೀಡಲಾಗಿದೆ.