ಇಡೀ ವಿಶ್ವವೇ ಕನ್ನಡ ಚಿತ್ರರಂಗವನ್ನು ತಿರುಗಿ ನೋಡುವಂತೆ ಮಾಡಿದ್ದ "ಕಾಂತಾರ", "ಕೆ‌ಜಿ‌ಎಫ್" ಚಿತ್ರಗಳಿಗೆ ರಾಷ್ಟ್ರ ಪ್ರಶಸ್ತಿ ಗರಿ

70th National Film Awards: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಪ್ರೊಡಕ್ಷನ್ ಹೌಸ್ 4 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. 

70th National Film Awards: ಭಾರತೀಯ ಚಿತ್ರರಂಗವಷ್ಟೇ ಅಲ್ಲ, ಇಡೀ ವಿಶ್ವವೇ ಕನ್ನಡ ಸಿನಿಮಾಗಳತ್ತ ತಿರುಗಿ ನೋಡುವಂತೆ ಮಾಡಿದ್ದ ಕನ್ನಡದ ಎರಡು ಸಿನಿಮಾಗಳಿಗೆ ಇದೀಗ ರಾಷ್ಟ್ರೀಯ ಪ್ರಶಸ್ತಿ ದೊರೆತಿದ್ದು, ಕನ್ನಡಿಗರ ದಸರಾ ಉತ್ಸಾಹ ಇಮ್ಮಡಿಗೊಂಡಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 2022ರಲ್ಲಿ ಹೊಂಬಾಳೆ ಫಿಲ್ಮ್ಸ್  ಪ್ರೊಡಕ್ಷನ್ ಹೌಸ್ ಕಮಾಲ್ ಮಾಡಿದ್ದು ಒಟ್ಟು ನಾಲ್ಕು ಪ್ರಶಸ್ತಿಗಳನ್ನು ಧಕ್ಕಿಸಿಕೊಂಡಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. 

2 /6

ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ಕಾಂತಾರ ಹಾಗೂ ಕೆ‌ಜಿ‌ಎಫ್ ಚಿತ್ರಗಳು ತಲಾ ಎರಡೆರಡು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದು ಕನ್ನಡದ ಕೀರ್ತಿಯನ್ನು ಹೆಚ್ಚಿಸಿವೆ. 

3 /6

ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ "ಕಾಂತಾರ" ಅತ್ಯುತ್ತಮ ಜನಪ್ರಿಯ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

4 /6

ಕಾಂತಾರ ಚಿತ್ರದ ಅಮೋಘ ಅಭಿನಯಕ್ಕಾಗಿ ನಟ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ. 

5 /6

ರಾಕಿಂಗ್ ಸ್ಟಾರ್ ಯಶ್ ಅಭಿನಯದ "ಕೆ‌ಜೆ‌ಎಫ್ 2" ಚಿತ್ರಕ್ಕೂ ಸಹ ಎರಡು ರಾಷ್ಟ್ರ ಪ್ರಶಸ್ತಿ ಗರಿ ಏರಿದೆ. 

6 /6

ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ ಮೆಚ್ಚಿದ ಜನಪ್ರಿಯ ಚಿತ್ರ "ಕೆ.ಜಿ.ಎಫ್ ೨"  ಅತ್ಯುತ್ತಮ ಕನ್ನಡ ಚಲನಚಿತ್ರ ಹಾಗೂ ಅತ್ಯುತ್ತಮ ಸಾಹಸ ನಿರ್ದೇಶನಕ್ಕಾಗಿ ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.  ಹೊಂಬಾಳೆ ಫಿಲಂಸ್ ನ ಶೈಲಜಾ ವಿಜಯ್ ಕುಮಾರ್ ಹಾಗೂ ಸಾಹಸ ನಿರ್ದೇಶಕ ಅನ್ಬರಿವು ಪ್ರಶಸ್ತಿ ಸ್ವೀಕರಿಸಿದ್ದಾರೆ.