ಇಡೀ ವಿಶ್ವವೇ ಕನ್ನಡ ಚಿತ್ರರಂಗವನ್ನು ತಿರುಗಿ ನೋಡುವಂತೆ ಮಾಡಿದ್ದ `ಕಾಂತಾರ`, `ಕೆಜಿಎಫ್` ಚಿತ್ರಗಳಿಗೆ ರಾಷ್ಟ್ರ ಪ್ರಶಸ್ತಿ ಗರಿ
70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 2022ರಲ್ಲಿ ಹೊಂಬಾಳೆ ಫಿಲ್ಮ್ಸ್ ಪ್ರೊಡಕ್ಷನ್ ಹೌಸ್ ಕಮಾಲ್ ಮಾಡಿದ್ದು ಒಟ್ಟು ನಾಲ್ಕು ಪ್ರಶಸ್ತಿಗಳನ್ನು ಧಕ್ಕಿಸಿಕೊಂಡಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ಕಾಂತಾರ ಹಾಗೂ ಕೆಜಿಎಫ್ ಚಿತ್ರಗಳು ತಲಾ ಎರಡೆರಡು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದು ಕನ್ನಡದ ಕೀರ್ತಿಯನ್ನು ಹೆಚ್ಚಿಸಿವೆ.
ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ "ಕಾಂತಾರ" ಅತ್ಯುತ್ತಮ ಜನಪ್ರಿಯ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಕಾಂತಾರ ಚಿತ್ರದ ಅಮೋಘ ಅಭಿನಯಕ್ಕಾಗಿ ನಟ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ "ಕೆಜೆಎಫ್ 2" ಚಿತ್ರಕ್ಕೂ ಸಹ ಎರಡು ರಾಷ್ಟ್ರ ಪ್ರಶಸ್ತಿ ಗರಿ ಏರಿದೆ.
ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ ಮೆಚ್ಚಿದ ಜನಪ್ರಿಯ ಚಿತ್ರ "ಕೆ.ಜಿ.ಎಫ್ ೨" ಅತ್ಯುತ್ತಮ ಕನ್ನಡ ಚಲನಚಿತ್ರ ಹಾಗೂ ಅತ್ಯುತ್ತಮ ಸಾಹಸ ನಿರ್ದೇಶನಕ್ಕಾಗಿ ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಹೊಂಬಾಳೆ ಫಿಲಂಸ್ ನ ಶೈಲಜಾ ವಿಜಯ್ ಕುಮಾರ್ ಹಾಗೂ ಸಾಹಸ ನಿರ್ದೇಶಕ ಅನ್ಬರಿವು ಪ್ರಶಸ್ತಿ ಸ್ವೀಕರಿಸಿದ್ದಾರೆ.