ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಬಲ್ಲ ಮನೆಮದ್ದುಗಳಿವು
ನೈಸರ್ಗಿಕ ಮೌತ್ ಫ್ರೆಶ್ನರ್ ಆಗಿ ಬಳಸಲ್ಪಡುವ ಸೋಂಪು ಕೊಲೆಸ್ಟ್ರಾಲ್ ನಿರ್ವಹಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದಕ್ಕಾಗಿ, ರಾತ್ರಿ ಒಂದು ಗ್ಲಾಸ್ ನೀರಿನಲ್ಲಿ ಒಂದು ಚಮಚ ಸೋಂಪನ್ನು ನೆನೆಸಿ, ಮರುದಿನ ಬೆಳಿಗ್ಗೆ ಇದನ್ನು ಸೋಸಿ ಕುಡಿಯಿರಿ.
ಬೆಳ್ಳುಳ್ಳಿ ಕೂಡ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಇದು ತುಂಬಾ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ.
ಜೀರ್ಣಕ್ರಿಯೆಗೆ ಉತ್ತಮ ಎಂದು ಪರಿಗಣಿಸಲ್ಪಟ್ಟಿರುವ ಶುಂಠಿಯು ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿ ಆಗಿದೆ.
ಹಾಲಿನೊಂದಿಗೆ ಅರಿಶಿನ ಬೆರೆಸಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲ ಕೆಟ್ಟ ಕೊಲೆಸ್ಟ್ರಾಲ್ ಕೂಡ ನಿಯಂತ್ರಿಸಬಹುದು.
ವಿಟಮಿನ್ ಸಿ ಮತ್ತು ಆಂಟಿ-ಆಕ್ಸಿಡೆಂಟ್‌ಗಳ ಆಗರವಾಗಿರುವ ನೆಲ್ಲಿಕಾಯಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಅತ್ಯುತ್ತಮ ಮನೆಮದ್ದು. ನಿತ್ಯ ಒಂದೆರಡು ನೆಲ್ಲಿಕಾಯಿ ತಿಂದರೂ ಸಾಕು ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ನಿಯಂತ್ರಿಸಬಹುದು.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಿರಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.