ಹೇರ್ ಡೈ, ಕಲರ್ ಗೆ ಹೇಳಿ ಗುಡ್ ಬೈ, ಮನೆಯಲ್ಲಿಯೇ ಇರುವ ಈ ವಸ್ತುಗಳನ್ನು ಹಚ್ಚಿ ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಿ
ಈಗ ಕೂದಲು ಬಿಳಿಯಾಗುತ್ತದೆ ಎಂದು ಚಿಂತಿಸುವ ಅಗತ್ಯವಿಲ್ಲ. ಹೇರ್ ಡೈ, ಕಲರ್ ಅನ್ನು ಬಳಸದೆ ಮನೆಮದ್ದುಗಳ ಸಹಾಯದಿಂದಲೇ ಕೂದಲನ್ನು ಮತ್ತೆ ಕಪ್ಪು ಬಣ್ಣಕ್ಕೆ ತಿರುಗಿಸಬಹುದು.ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮವೂ ಇರುವುದಿಲ್ಲ ಎನ್ನುವುದು ಗಮನಿಸಬೇಕಾದ ಅಂಶ.
ನೆಲ್ಲಿಕಾಯಿ ಮತ್ತು ಕೊಬ್ಬರಿ ಎಣ್ಣೆಯ ಬಳಕೆಯಿಂದ ಬಿಳಿ ಕೂದಲು ಕಪ್ಪಾಗುತ್ತದೆ. 3 ಚಮಚ ತೆಂಗಿನ ಎಣ್ಣೆಯಲ್ಲಿ 2 ಚಮಚ ನೆಲ್ಲಿಕಾಯಿ ಪುಡಿಯನ್ನು ಸೇರಿಸಿ ಬಾಣಲೆಯಲ್ಲಿ ಬಿಸಿ ಮಾಡಿ. ನಂತರ ಅದನ್ನು ತಣ್ಣಗಾಗಿಸಿ ಕೂದಲಿಗೆ ಹಚ್ಚಿ ಮಸಾಜ್ ಮಾಡಿ. 15-20 ನಿಮಿಷಗಳ ನಂತರ ಕೂದಲನ್ನು ತೊಳೆಯಿರಿ.
1 ಚಮಚ ಕರಿ ಜೀರಿಗೆ 1 ಚಮಚ ಆಲಿವ್ ಎಣ್ಣೆಯನ್ನು ಮಿಶ್ರಣ ಮಾಡಿ. ಈಗ ಇದರೊಂದಿಗೆ ಕೂದಲಿನ ಬೇರುಗಳನ್ನು ಮಸಾಜ್ ಮಾಡಿ. 1 ಗಂಟೆಯ ನಂತರ ಶಾಂಪೂ ಮಾಡಿ. ವಾರಕ್ಕೊಮ್ಮೆ ಹೀಗೆ ಮಾಡುವುದರಿಂದ ಬಿಳಿ ಕೂದಲು ಮತ್ತೆ ಕಪ್ಪಾಗುವುದು.
4 ಚಮಚ ತೆಂಗಿನ ಎಣ್ಣೆಯನ್ನು ಕುದಿಸಿ ಮತ್ತು ಅದಕ್ಕೆ ಗೋರಂಟಿ ಎಲೆಗಳನ್ನು ಸೇರಿಸಿ. ಎಣ್ಣೆಯು ಗೋರಂಟಿಯ ಬಣ್ಣವನ್ನು ಪಡೆಯಲು ಪ್ರಾರಂಭಿಸಿದಾಗ, ಗ್ಯಾಸ್ ಆಫ್ ಮಾಡಿ. ಈ ಮಿಶ್ರಣ ಉಗುರು ಬೆಚ್ಚಗಿರುವಾಗಲೇ ಕೂದಲಿಗೆ ಹಚ್ಚಿ ಮಸಾಜ್ ಮಾಡಿ.ಒಂದು ಗಂಟೆಯ ನಂತರ ಶಾಂಪೂ ಮಾಡಿ.
ಕರಿಬೇವಿನ ಎಲೆಗಳಲ್ಲಿ ಜೈವಿಕ-ಸಕ್ರಿಯ ಅಂಶಗಳು ಕಂಡುಬರುತ್ತವೆ. ಇದು ಕೂದಲಿಗೆ ಸಂಪೂರ್ಣ ಪೋಷಣೆಯನ್ನು ನೀಡುತ್ತದೆ.ಕೂದಲಿಗೆ ಇದರ ಪೇಸ್ಟ್ ಹಚ್ಚುವುದರಿಂದ ಬಿಳಿ ಕೂದಲು ಕಪ್ಪಾಗುತ್ತದೆ. ಪ್ರತಿ ವಾರವೂ ಕರಿಬೇವಿನ ಎಲೆಯನ್ನು ತೆಂಗಿನ ಎಣ್ಣೆಯಲ್ಲಿ ಬೆರೆಸಿ ಹಚ್ಚಬಹುದು.