ನೌಕರರ ಬೇಡಿಕೆ ಈಡೆರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವೆ-ಸಚಿವ ಸಂತೋಷ ಲಾಡ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಮಾಹಿತಿ ಹಕ್ಕು ಅಧಿನಿಯಮ ಮತ್ತು, ಸಿಸಿಎ ನಿಯಮ, ಕೆಸಿಎಸ್ ನಿಯಮ ಸರಕಾರಿ ನೌಕರನ ಕೈಕಾಲುಗಳಿದ್ದಂತೆ. ಇವುಗಳ ಸರಿಯಾದ ತಿಳುವಳಿಕೆ ಇದ್ದರೆ ಮಾತ್ರ, ಉತ್ತಮವಾಗಿ ನಿಯಮಾನುಸಾರ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಇಂತಹ ಕಾರ್ಯಾಗಾರಗಳ ಅಗತ್ಯವಿದೆ ಎಂದು ಅವರು ಹೇಳಿದರು.
ನೌಕರ ಸಂಘದ ಜಿಲ್ಲಾ ಘಟಕವು ಸಲ್ಲಿಸಿರುವ ಬೇಡಿಕೆಗಳಿಗೆ ತಾವು ನೆರವು ನೀಡುವುದಾಗಿ ಮತ್ತು ಸಭಾಗಂಣ ನಿರ್ಮಾಣಕ್ಕೆ ಅನುದಾನ ಕಲ್ಪಿಸುವುದಾಗಿ ತಿಳಿಸಿದರು. ಎನ್‍ಪಿಎಸ್ ರದ್ದತಿ ಬಗ್ಗೆ ಸರಕಾರಕ್ಕೆ ತಮ್ಮ ಮನವಿಯನ್ನು ತಲುಪಿಸುವುದಾಗಿ ಸಚಿವರು ಹೇಳಿದರು
ಸರಕಾರಿ ನೌಕರರು ಸೇರಿದಂತೆ ಎಲ್ಲರೂ ಬದ್ದತೆ, ಪಾರದರ್ಶಕತೆಯಿಂದ ತಮ್ಮ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಆದ್ದರಿಂದ ನೌಕರರು ಉದಾರತೆಯಿಂದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಅವರು ತಿಳಿಸಿದರು
ಸರಕಾರವು ಅಭಿವೃದ್ಧಿ ಕಾರ್ಯಗಳೊಂದಿಗೆ ಸರಕಾರಿ ನೌಕರರ ಬೇಡಿಕೆ ಈಡೆರಿಸುವ ಬದ್ದವಾಗಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಸರಕಾರ ಕ್ರಮವಹಿಸಲಿದೆ. ಹಸಿವಿನ ಸೂಚಾಂಕದಲ್ಲಿ ನಮ್ಮ ದೇಶ ಕೆಳಗೆ ಬರುತ್ತಿದೆ. ಜಿಡಿಪಿ ಬೆಳವಣಿಗೆ ಕಾಣುತ್ತಿದೆ. ಆದರೆ ಅದು ಸಮಾಜದಲ್ಲಿ ಕಾಣುತ್ತಿಲ್ಲ ಎಂದರು.
ರಾಜ್ಯ ಸರ್ಕಾರವು ರಾಷ್ಟ್ರಕ್ಕೆ ಮಾದರಿಯಾಗುವ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳ್ಳಿಸಿದೆ. ಶಕ್ತಿ ಯೋಜನೆ ಜಾರಿಯಾಗಿದ್ದರಿಂದ ಇಂದು 1.16 ಕೋಟಿ ಜನ ಪ್ರಯಾಣ ಮಾಡುತ್ತಿದ್ದಾರೆ. ಇಂತಹ ಸಾಧನೆಗೆ ಸರ್ವರ ಸಹಕಾರವೂ ಮುಖ್ಯ ಎಂದು ಅವರು ಹೇಳಿದರು.