ತೂಕವನ್ನು ಕಳೆದುಕೊಳ್ಳಲು, ಜೇನುತುಪ್ಪವನ್ನು 3 ರೀತಿಯಲ್ಲಿ ಸೇವಿಸಬಹುದು. ಈ ರೀತಿಯಲ್ಲಿ ಸೇವಿಸುವುದರಿಂದ ಹೊಟ್ಟೆ ಮತ್ತು ಸೊಂಟದ ಭಾಗದಲ್ಲಿ ಸೇರಿಕೊಂಡಿರುವ ಬೊಜ್ಜು ಸುಲಭವಾಗಿ ಕರಗುತ್ತದೆ.
Honey for Weight Loss : ತೂಕ ಇಳಿಸಿಕೊಳ್ಳಲು ನಾವು ಸಾಕಷ್ಟು ಪ್ರಯೋಗಗಳನ್ನು ಮಾಡುತ್ತಿರುತ್ತೇವೆ. ಪ್ರತಿಯೊಬ್ಬರ ದೇಹವು ವಿಭಿನ್ನವಾಗಿರುತ್ತದೆ. ಹಾಗಾಗಿ ದೇಹದ ಮೇಲೆ ಪರಿಣಾಮ ಬೀರುವ ಕ್ರಮಗಳು ಸಹ ವಿಭಿನ್ನವಾಗಿರಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕೆಲವು ಮನೆಮದ್ದುಗಳ ಸಹಾಯದಿಂದ ತೂಕವನ್ನು ಕಳೆದುಕೊಳ್ಳಬಹುದು. ತೂಕ ನಷ್ಟ ಪ್ರಯೋಗಗಳಲ್ಲಿ ಜೇನುತುಪ್ಪದ ಸೇವನೆ ಕೂಡಾ ಒಂದು. ರಾತ್ರಿ ವೇಳೆ ಜೇನುತುಪ್ಪವನ್ನು ತಿನ್ನುವುದರಿಂದ ತೂಕವನ್ನು ಕಡಿಮೆ ಮಾಡಬಹುದು.
ಅಮೇರಿಕನ್ ಕಾಲೇಜ್ ಆಫ್ ನ್ಯೂಟ್ರಿಷನ್ ನಡೆಸಿದ ಅಧ್ಯಯನದ ಪ್ರಕಾರ, ಜೇನುತುಪ್ಪವನ್ನು ಸೇವಿಸುವ ಮೂಲಕ ಹಸಿವನ್ನು ನಿಯಂತ್ರಿಸಬಹುದು.ರಾತ್ರಿ ವೇಳೆ ಜೇನುತುಪ್ಪವನ್ನು ತಿನ್ನುವ ಮೂಲಕ ಮಲಗುವ ಮೊದಲು ಮೊದಲ ಗಂಟೆಯಲ್ಲಿ ಹೆಚ್ಚಿನ ಕ್ಯಾಲೊರಿಗಳನ್ನು ಬರ್ನ್ ಮಾಡಬಹುದು.
ಬೆಳ್ಳುಳ್ಳಿಯನ್ನು ಜೇನುತುಪ್ಪದೊಂದಿಗೆ ಬೆರೆಸುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಸಾಮಾನ್ಯವಾಗಿ, ರುಚಿ ಮತ್ತು ವಾಸನೆಯಿಂದಾಗಿ ಹಸಿ ಬೆಳ್ಳುಳ್ಳಿಯನ್ನು ಸೇವಿಸುವುದು ಕಷ್ಟ.ಆದರೆ, ಇದನ್ನು ಜೇನುತುಪ್ಪದೊಂದಿಗೆ ಸುಲಭವಾಗಿ ತಿನ್ನಬಹುದು. ಒಂದು ಲೋಟ ಉಗುರುಬೆಚ್ಚನೆಯ ನೀರಿನೊಂದಿಗೆ ಜೇನುತುಪ್ಪ ಮತ್ತು 2 ಹಸಿ ಬೆಳ್ಳುಳ್ಳಿಯನ್ನು ಸೇವಿಸಿದರೆ ಬೊಜ್ಜು ಕರಗಿ ತೂಕ ಇಳಿಯುತ್ತದೆ.
ಅನೇಕ ಜನರು ರಾತ್ರಿಯಲ್ಲಿ ಹಾಲನ್ನು ಸೇವಿಸುತ್ತಾರೆ. ಆದರೆ ತೂಕವನ್ನು ಕಳೆದುಕೊಳ್ಳಲು, ಅದಕ್ಕೆ ಶುದ್ಧ ಜೇನುತುಪ್ಪವನ್ನು ಸೇರಿಸಿ ಕುಡಿಯಬೇಕು. ಹೀಗೆ ಮಾಡುವುದರಿಂದ ನಿಮ್ಮ ಮೆಟಾಬಾಲಿಸಂ ವೇಗವಾಗುತ್ತದೆ. ಹೀಗಾದಾಗ ಹೆಚ್ಚು ಕೊಬ್ಬು ಬರ್ನ್ ಆಗುತ್ತದೆ.
ಜೇನುತುಪ್ಪ ಮತ್ತು ನಿಂಬೆ ನೀರಿನ ಸೇವನೆಯು ತೂಕ ನಷ್ಟಕ್ಕೆ ಅತ್ಯಂತ ಜನಪ್ರಿಯ ಪರಿಹಾರವಾಗಿದೆ. ಉಗುರು ಬೆಚ್ಚಗಿನ ನೀರನ್ನು ಬಳಸಿ ಮತ್ತು ದಿನದ ಯಾವುದೇ ಸಮಯದಲ್ಲಿಯಾದರೂ ಸೇವಿಸಬಹುದು. ಇದು ನಿಮ್ಮ ಚಯಾಪಚಯವನ್ನು ವೇಗಗೊಳಿಸುವ ಮೂಲಕ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. (ಸೂಚನೆ : ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee Kannada News ಅದನ್ನು ಅನುಮೋದಿಸುವುದಿಲ್ಲ.)