ತೂಕ ಇಳಿಕೆಯಷ್ಟೇ ಅಲ್ಲ ಈ ಸಮಸ್ಯೆಗಳಿಗೂ ವರದಾನ ಜೇನು
ಆಯುರ್ವೇದ ಚಿಕಿತ್ಸೆಯಲ್ಲಿ ಹೆಚ್ಚಾಗಿ ಬಳಸಲ್ಪಡುವ ಜೇನುತುಪ್ಪ ಆರೋಗ್ಯಕ್ಕೆ ವರದಾನ ವಿದ್ದಂತೆ. ಇದರ ಅದ್ಭುತ ಆರೋಗ್ಯ ಪ್ರಯೋಜನಗಳೆಂದರೆ...
ಬೆಚ್ಚಗಿನ ನೀರಿನಲ್ಲಿ ಜೇನುತುಪ್ಪವನ್ನು ಬೆರೆಸಿ ನಿತ್ಯ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಇದು ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಕರಗಿಸಿ ತೂಕ ಇಳಿಕೆಗೆ ಸಹಾಯಕವಾಗಿದೆ.
ಜೇನುತುಪ್ಪದಲ್ಲಿರುವ ಫ್ಲೇವನಾಯ್ಡ್‌ಗಳು ಕ್ಯಾನ್ಸರ್ ತಡೆಗಟ್ಟಲು ಸಹಾಯಕವಾಗಿದೆ.
ಜೇನುತುಪ್ಪದಲ್ಲಿರುವ ಔಷಧೀಯ ಗುಣಗಳು ನಮ್ಮನ್ನು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ತುಂಬಾ ಪ್ರಯೋಜನಕಾರಿ ಆಗಿದೆ.
ಶೀತ, ಗಂಟಲು ಕಿರಿಕಿರಿ, ನೆಗಡಿಯಂತಹ ಸಂದರ್ಭದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ಜೇನುತುಪ್ಪ ತಿನ್ನುವುದು ಪ್ರಯೋಜನಕಾರಿ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.