ಹೊಸ ವರ್ಷಾರಂಭದಲ್ಲಿಯೇ ಪವರ್ಫುಲ್ ತ್ರಿಗ್ರಹಿ ಯೋಗ ನಿರ್ಮಾಣ, ಈ ಜನರಿಗೆ ಆಕಸ್ಮಿಕ ಧನಲಾಭದ ಜೊತೆಗೆ ಬ್ಯಾಗ್ಯೋದಯ ಯೋಗ!

Thu, 07 Dec 2023-2:20 pm,

Horoscope 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹೊಸ ವರ್ಷಾರಂಭದಲ್ಲಿಯೇ ಮಕರ ರಾಶಿಯಲ್ಲಿ ಪವರ್ಫುಲ್ ತ್ರಿಗ್ರಹಿ ಯೋಗ ರಚನೆಯಾಗುತ್ತಿದೆ. ಈ ಯೋಗ ರಚನೆಯಿಂದ ಮೂರು ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭದ ಜೊತೆಗೆ ಭಾಗ್ಯೋದಯ ಯೋಗ ರೂಪುಗೊಳ್ಳುತ್ತಿದೆ. (Spiritual News In Kannada)

ಮಕರ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನ ಪ್ರಾಪ್ತಿಯಾಗಿ ಆರ್ಥಿಕ ಸ್ಥಿತಿ ಮತ್ತಷ್ಟು ಬಲಗೊಳ್ಳಲಿದೆ. ಹಣಗಳಿಕೆಯ ಸಾಕಷ್ಟು ಅವಕಾಶಗಳು ನಿಮಗೆ ಒದಗಿ ಬರಲಿದ್ದು. ಮೊದಲಿಗಿಂತ ಹೆಚ್ಚು ಹಣ ಉಳಿತಾಯ ಮಾಡುವಲ್ಲಿ ನೀವು ಯಶಸ್ವಿಯಾಗುವಿರಿ. ಇನ್ನೊಂದೆಡೆ ಸೂರ್ಯನ ಪ್ರಭಾವದಿಂದ ನಿಮ್ಮಲ್ಲಿ ಹೊಸ ಆತ್ಮವಿಶ್ವಾಸ ಇರಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನಲ್ಲಿ ಹೊಸ ಚೈತನ್ಯ ಇರಲಿದ್ದು, ಜನರು ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. ವಿವಾಹಿತರ ವೈವಾಹಿಕ ಜೀವನ ಸುಮಧುರವಾಗಿರಲಿದೆ. 

ತುಲಾ ರಾಶಿ: ಈ ಯೋಗದಿಂದ ನಿಮ್ಮ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಲ್ಲಳಿವೆ. ಏಕೆಂದರೆ ಈ ಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ನಿಮಗೆ ವಾಹನ, ಪ್ರಾಪರ್ಟಿ ಸುಖ ಪ್ರಾಪ್ತಿಯಾಗಲಿದೆ. ಇದಲ್ಲದೆ ನಿಮಗೆ ಪಿತ್ರಾರ್ಜಿತ ಸಂಪತ್ತಿನ ಲಾಭ ಸಿಗಲಿದೆ. ನೀವು ಮಾಡುವ ಕೆಲಸ ಕಾರ್ಯಗಳಲ್ಲಿ ನಿಮಗೆ ಲಾಭ ಸಿಗಲಿದೆ ಹಾಗೂ ಜೀವನದಲ್ಲಿ ಸಕಾರಾತ್ಮಕ ಪ್ರಭಾವ ಹೆಚ್ಚಾಗಲಿದೆ. ಈ ಯೋಗದ ದೃಷ್ಟಿ ನಿಮ್ಮ ಕರ್ಮಭಾವದ ಮೇಲೆ ಇರುವ ಕಾರಣ, ಕೆಲಸ ಕಾರ್ಯಗಳಲ್ಲಿ ನಿಮಗೆ ಉತ್ತಮ ಯಶಸ್ಸು ಸಿಗಲಿದೆ. ನೌಕರ ವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗಲಿದೆ. 

ವೃಷಭ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ನವಮಭಾವದಲ್ಲಿ ರೂಪುಗೂಳ್ಳುತ್ತಿದ್ದು, ಇದರಿಂದ ನಿಮಗೆ ಅದೃಷ್ಟದ ಬೆಂಬಲ ಸಿಗಲಿದೆ. ನಿಂತು ಹೋದ ಕಾರ್ಯಗಳು ಪೂರ್ಣಗೊಳ್ಳಲಿವೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಿರೀಕ್ಷಿತ ಯಶಸ್ಸು ಸಿಗಲಿದೆ. ಕೆಲಸದ ಸ್ಥಳದಲ್ಲಿ ನಿಮಗೆ ನಿಮ್ಮ ಹಿರಿಯರ ಬೆಂಬಲ ಸಿಗಲಿದೆ. ಈ ಅವಧಿಯಲ್ಲಿ ಸಣ್ಣ ಅಥವಾ ದೊಡ್ಡ ಯಾತ್ರೆ ಸಂಭವಿಸುವ ಸಾಧ್ಯತೆ ಇದ್ದು, ಅದು ಶುಭ ಸಾಬೀತಾಗಲಿದೆ. ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link