ರೇಷನ್ ಕಾರ್ಡ್‌ನಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡುವುದೇಗೆ? ಪತ್ನಿ, ಮಕ್ಕಳ ಹೆಸರನ್ನೂ ಸೇರಿಸ್ಬೋದು!!

Mon, 23 Dec 2024-10:03 pm,

ಹಲವು ಯೋಜನೆಗಳು ಹಾಗೂ ಕಡಿಮೆ ದರದಲ್ಲಿ ಜನರಿಗೆ ಪಡಿತರ ಸಿಗಲೆಂದು ಸರ್ಕಾರವು ಪಡಿತರ ಚೀಟಿಗಳನ್ನು ನೀಡುತ್ತದೆ. ಇದೀಗ ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಪಡಿತರ ಚೀಟಿಯಲ್ಲಿ ನೀವು ಸೇರಿಸಬಹುದು. ಹೊಸದಾಗಿ ಮದುವೆಯಾದವರು ತಮ್ಮ ಪತ್ನಿಯ ಹೆಸರು ಹಾಗೂ ಮಕ್ಕಳ ಹೆಸರನ್ನೂ ಸೇರಿಸಬಹುದು. ಆನ್‌ಲೈನ್‌ನಲ್ಲಿ ನೀವು ತುಂಬಾ ಸುಲಭವಾಗಿ ಮನೆಯ ಹೊಸ ಸದಸ್ಯರ ಹೆಸರುಗಳನ್ನು ಸೇರಿಸಬಹುದು.

ಹೌದು, ನಿಮ್ಮ ಮನೆಯ ಪಡಿತರ ಚೀಟಿಗೆ ನಿಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರು ಸೇರ್ಪಡೆಯಾಗದಿದ್ದರೆ ಚಿಂತಿಸಬೇಕಾಗಿಲ್ಲ. ಮನೆಯಿಂದಲೇ ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ಸದಸ್ಯರ ಹೆಸರನ್ನು ಸೇರಿಸಬಹುದು. ಇದಕ್ಕಾಗಿ ನೀವು ಕುಟುಂಬ ಮುಖ್ಯಸ್ಥರ ಪಡಿತರ ಚೀಟಿ ಮತ್ತು ಅದರ ಫೋಟೋ ಪ್ರತಿಯನ್ನು ಹೊಂದಿರಬೇಕು. ಪಡಿತರ ಚೀಟಿಗೆ ನಿಮ್ಮ ಮಗುವಿನ ಹೆಸರು ಸೇರ್ಪಡೆ ಮಾಡಬೇಕೆಂದರೆ ಮಗುವಿನ ಜನನ ಪ್ರಮಾಣ ಪತ್ರ ಮತ್ತು ಹೆತ್ತವರ ಆಧಾರ್ ಕಾರ್ಡ್ ಅಗತ್ಯವಾಗಿ ಬೇಕಾಗುತ್ತದೆ. ಅಲ್ಲದೆ ವಿವಾಹಿತ ಮಹಿಳೆಯ ಹೆಸರನ್ನು ಪಡಿತರ ಚೀಟಿಗೆ ಸೇರಿಸಬೇಕಾಗುತ್ತದೆ.

ಪಡಿತರ ಚೀಟಿಯಲ್ಲಿ ಹೊಸದಾಗಿ ನಿಮ್ಮ ಪತ್ನಿಯ ಹೆಸರು ಸೇರಿಸಲು ಅವರ ಆಧಾರ್ ಕಾರ್ಡ್, ಮದುವೆ ಪ್ರಮಾಣ ಪತ್ರ ಮತ್ತು ಪೋಷಕರ ಪಡಿತರ ಚೀಟಿಯ ದಾಖಲೆಗಳು ಅಗತ್ಯವಾಗಿ ಬೇಕಾಗುತ್ತದೆ. ಇನ್ನು ಮಗುವಿನ ಹೆಸರು ಸೇರಿಸಲು ಆ ಮಗುವಿನ ಜನನ ಪ್ರಮಾಣಪತ್ರ ಮತ್ತು ಹೆತ್ತವರ ಅಂದರೆ ತಂದೆ-ತಾಯಿಯ ಆಧಾರ್ ಕಾರ್ಡ್ ದಾಖಲೆಗಳು ಬೇಕಾಗುತ್ತವೆ.  

ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ನಿಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಸೇರಿಸಲು, ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಇದರ ನಂತರ ನೀವು IDಯನ್ನು ರಚಿಸಬೇಕಾಗುತ್ತದೆ. ನಿಮ್ಮ ಐಡಿಯನ್ನು ಈಗಾಗಲೇ ಕ್ರಿಯೆಟ್‌ ಮಾಡಿದ್ದರೆ ನೀವು ಲಾಗಿನ್ ಆಗಬೇಕು. ನಂತರ ನಿಮ್ಮ ಪಡಿತರ ಚೀಟಿಯ ವಿವರಗಳನ್ನು ಕಾಣುತ್ತೀರಿ. ಅದರಲ್ಲಿ ಹೊಸ ಸದಸ್ಯರನ್ನು ಸೇರಿಸುವ ಆಯ್ಕೆ ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ, ನಂತರ ಹೊಸ ಸದಸ್ಯರನ್ನು ಸೇರಿಸಲು ಫಾರ್ಮ್ ಭರ್ತಿ ಮಾಡಬೇಕಾಗುತ್ತದೆ.

ಇದರ ಜೊತೆಗೆ ಹೊಸ ಸದಸ್ಯರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು. ನಂತರ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ವಿವರಗಳು ಮತ್ತು ದಾಖಲೆಗಳನ್ನು ಭರ್ತಿ ಮಾಡಿದ ನಂತರ, ನೀವು ಫಾರ್ಮ್ ಅನ್ನು Submit ಮಾಡಬೇಕಾಗುತ್ತದೆ. ನಂತರ ನಿಮ್ಮ ನೋಂದಣಿ ಸಂಖ್ಯೆಯನ್ನು ಸ್ವೀಕರಿಸುತ್ತೀರಿ. 

ಇದೇ ನೋಂದಣಿ ಸಂಖ್ಯೆಯೊಂದಿಗೆ ನಿಮ್ಮ ವಿನಂತಿಯನ್ನು ನೀವು ಟ್ರ್ಯಾಕ್ ಮಾಡಬಹುದು. ನಂತರ ನಿಮ್ಮ ಫಾರ್ಮ್ ಮತ್ತು ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಎಲ್ಲವೂ ಸರಿಯಾಗಿದ್ದರೆ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸಲಾಗುತ್ತದೆ. ಹತ್ತಿರದ ಪಡಿತರ ಅಂಗಡಿಗೆ ಹೋಗುವ ಮೂಲಕ ನಿಮ್ಮ ಪಡಿತರ ಚೀಟಿಯಲ್ಲಿ ನಿಮ್ಮ ಹೆಸರನ್ನು ಸೇರ್ಪಡೆ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನೀವು ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link