ಆಭರಣ ಪ್ರಿಯರ ಮುಖದಲ್ಲಿ ಸಂತಸ ! ವರ್ಷದ ಕೊನೆಗೆ ಯದ್ವಾತದ್ವಾ ಇಳಿದ ಬಂಗಾರದ ಬೆಲೆ !
ವರ್ಷದ ಅಂತ್ಯದಲ್ಲಿ ಹೆಂಗಳೆಯರಿಗೆ ತುಸು ನೆಮ್ಮದಿ ಸಿಕ್ಕಿದೆ. ವಾರದ ಮೊದಲ ದಿನವೇ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಕುಸಿದಿದೆ.
ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಏರಿಕೆ ಕಂಡರೂ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಲೆಗಳು ಕುಸಿದಿದೆ. ಮಾರುಕಟ್ಟೆ ಆರಂಭವಾಗುತ್ತಿದ್ದ ಹಾಗೆ ಇಳಿಕೆ ಕಂಡ ಹಳದಿ ಲೋಹದ ಬೆಲೆ ಮುಕ್ತಾಯದ ವೇಳೆಯಲ್ಲಿಯೂ ಕುಸಿತ ದಾಖಲಾಗಿದೆ.
ಇಂಡಿಯಾ ಬುಲಿಯನ್ ಮತ್ತು ಜ್ಯುವೆಲ್ಲರ್ಸ್ ಅಸೋಸಿಯೇಶನ್‌ನ ಅಧಿಕೃತ ವೆಬ್‌ಸೈಟ್ ibjarates.com ನ ದರಗಳ ಪ್ರಕಾರ, ವಾರದ ಮೊದಲ ದಿನದಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.
ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 221 ರೂಪಾಯಿ ಇಳಿಕೆಯೊಂದಿಗೆ 69,794 296 ರೂ.ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಕೂಡಾ 656 ರೂಪಾಯಿ ಕುಸಿದು 87,43175 ಕ್ಕೆ ತಲುಪಿದೆ. ಈ ಮೂಲಕ ಚಿನ್ನ ಮತ್ತು ಬೆಳ್ಳಿ ಎರಡೂ ದರಗಳಲ್ಲಿ ಇಳಿಕೆ ಕಂಡು ಬಂದಿದೆ.
ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಶ್ತುಇದೆ ಎಂದು ನಿಖರವಾಗಿ ತಿಳಿದುಕೊಳ್ಳಲು ಇಂಡಿಯಾ ಬುಲಿಯನ್ ಮತ್ತು ಜ್ಯುವೆಲ್ಲರ್ಸ್ ಅಸೋಸಿಯೇಶನ್‌ನ ಅಧಿಕೃತ ವೆಬ್‌ಸೈಟ್ ibjarates.comಗೆ ಭೇಟಿ ನೀಡಬಹುದು.