ಚಿನ್ನದ ಬೆಲೆಯಲ್ಲಿ ಭಾರೀ ಬದಲಾವಣೆ !ಬಂಗಾರ ಈಗಲೇ ಖರೀದಿಸುವುದು ಉತ್ತಮವೇ ?
ಚಿನ್ನದ ಬೆಲೆಯಲ್ಲಿ ಮತ್ತೆ ಏರಿಳಿತ ಕಾಣುತ್ತಿದೆ. ಕಳೆದ ವಾರದ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿತ್ತು. ಇದೀಗ ಮತ್ತೆ ಬಂಗಾರದ ಬೆಲೆಯಲ್ಲಿ ಬದಲಾವಣೆ ಕಂಡು ಬರುತ್ತಿದೆ.
ಹಾಗಿದ್ದರೆ ಚಿನ್ನ ಖರೀದಿಗೆ ಇದುವೇ ಸರಿಯಾದ ಸಮಯವೇ ಎನ್ನುವ ಪ್ರಶ್ನೆ ಜನ ಸಾಮಾನ್ಯರನ್ನು ಕಾಡುವುದು ಸಹಜ.
ಇಳಿಕೆಯಲ್ಲಿದ್ದ ಚಿನ್ನ ಇದೀಗ ಮತ್ತೆ ಏರಿಕೆಯಾಗುತ್ತಿದೆ. ಇಂದು ಚಿನ್ನದ ಬೆಲೆಯು ಫ್ಯೂಚರ್ ಮಾರುಕಟ್ಟೆಯಲ್ಲಿ 10 ಗ್ರಾಂಗೆ 454 ರೂಪಾಯಿಗಳಷ್ಟು ಏರಿಕೆ ಕಂಡು 78,792 ರೂಪಾಯಿಗಳಿಗೆ ತಲುಪಿದೆ.
ಭೌಗೋಳಿಕ-ರಾಜಕೀಯ ಉದ್ವಿಗ್ನತೆ ಮತ್ತು ಯುಎಸ್ ಫೆಡರಲ್ ರಿಸರ್ವ್ ಬ್ಯಾಂಕ್ ಬಡ್ಡಿದರ ಕಡಿತದ ನಿರೀಕ್ಷೆಗಳಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಏರಿಕೆಗೆ ಸಾಕ್ಷಿಯಾಗುತ್ತಿದೆ. ಇಂದು ಚಿನ್ನವು ಎರಡು ವಾರಗಳ ಗರಿಷ್ಠ ಮಟ್ಟಕ್ಕೆ ಅಂದರೆ ಔನ್ಸ್‌ಗೆ 2,698 ಡಾಲರ್ ಗೆ ತಲುಪಿದೆ.
ಇಂಡಿಯಾ ಬುಲಿಯನ್ ಮತ್ತು ಜ್ಯುವೆಲ್ಲರ್ಸ್ ಅಸೋಸಿಯೇಶನ್‌ನ ಅಧಿಕೃತ ವೆಬ್‌ಸೈಟ್ ibjarates.com ದರಗಳ ಪ್ರಕಾರ, 999 ಶುದ್ಧತೆಯ 10 ಗ್ರಾಂ ಚಿನ್ನವು ಇಂದು ಚಿನಿವಾರ ಪೇಟೆಯಲ್ಲಿ 694 ರೂಪಾಯಿಯಷ್ಟು ಏರಿಕೆಯಾಗಿ 77,869 ರೂ.ಗೆ ಏರಿದೆ. ಬೆಳ್ಳಿ ಬೆಲೆಯಲ್ಲಿ ಸಾಮಾನ್ಯ ಏರಿಕೆ ಕಂಡಿದೆ.
ಬಂಗಾರದ ಇಂದಿನ ನಿಖರವಾದ ಬೆಲೆಯನ್ನು ತಿಳಿಯಲು ಇಂಡಿಯಾ ಬುಲಿಯನ್ ಮತ್ತು ಜ್ಯುವೆಲ್ಲರ್ಸ್ ಅಸೋಸಿಯೇಷನ್ ಅಧಿಕೃತ ವೆಬ್ ಸೈಟ್ ಅನ್ನು ವೀಕ್ಷಿಸಬಹುದು. ಇಲ್ಲಿ ಬೆಳಿಗ್ಗೆ ಮತ್ತು ಸಂಜೆ ಎರಡು ಬಾರಿ ಬೆಲೆಯನ್ನು ಘೋಷಿಸಲಾಗುತ್ತದೆ.