Hypertension: ಈ ಆಹಾರಗಳನ್ನು ಸೇವಿಸಿದ್ರೆ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ!
ಕುಂಬಳಕಾಯಿ ಬೀಜಗಳು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಕುಂಬಳಕಾಯಿ ಬೀಜಗಳಲ್ಲಿ ಅಮೈನೋ ಆಮ್ಲಗಳು, ನೈಟ್ರಿಕ್ ಆಕ್ಸೈಡ್ ಇರುತ್ತದೆ. ಇವು ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿವೆ.
ಟೊಮೆಟೊದಲ್ಲಿರುವ ಲೈಕೋಪೀನ್ ಎಂಬ ಸಂಯುಕ್ತವು ದೇಹದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ದೈನಂದಿನ ಆಹಾರದಲ್ಲಿ ಹೆಚ್ಚು ಟೊಮೆಟೊಗಳನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.
ಅಧಿಕ ರಕ್ತದೊತ್ತಡ ರೋಗಿಗಳಿಗೆ ಮೊಸರು ಉತ್ತಮ ಆಹಾರವಾಗಿದೆ. ಈ ಆಹಾರವು ಕ್ಯಾಲ್ಸಿಯಂ, ಪೊಟ್ಯಾಸಿಯಂ ಮತ್ತು ಮೆಗ್ನೀಸಿಯಂ ಹೊಂದಿರುತ್ತದೆ. ಇದು ಸಹ ರಕ್ತದೊತ್ತಡವನ್ನು ನಿಯಂತ್ರಣಡಲು ಸಹಕಾರಿಯಾಗಿದೆ.
ಬಾಳೆಹಣ್ಣು ಮಧುಮೇಹ ರೋಗಿಗಳಿಗೆ ತುಂಬಾ ಒಳ್ಳೆಯದು. ಬಾಳೆಹಣ್ಣು ಪೊಟ್ಯಾಸಿಯಮ್ನಲ್ಲಿ ಸಮೃದ್ಧವಾಗಿದೆ. ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಬೀಟ್ರೂಟ್ ತರಕಾರಿಯು ಅಧಿಕ ರಕ್ತದೊತ್ತಡ ರೋಗಿಗಳಿಗೆ ಉತ್ತಮ. ಬೀಟ್ರೂಟ್ ಕರಿ ಅಥವಾ ಜ್ಯೂಸ್ ಸೇವನೆಯಿಂದ ರಕ್ತದೊತ್ತಡವನ್ನು ನಿಯಂತ್ರಿಸಬಹುದು.
ಮಧುಮೇಹ ರೋಗಿಗಳು ಪೌಷ್ಟಿಕಾಂಶವುಳ್ಳ ತರಕಾರಿಗಳನ್ನು ಸೇವಿಸಬೇಕು. ದೈನಂದಿನ ಆಹಾರದಲ್ಲಿ ಸಾಕಷ್ಟು ಸೊಪ್ಪು-ತರಕಾರಿ ಸೇವಿಸುವುದರಿಂದ ಅಧಿಕ ರಕ್ತದೊತ್ತಡದ ಜೊತೆಗೆ ಹೃದ್ರೋಗದ ಅಪಾಯ ಕಡಿಮೆ ಮಾಡಬಹುದು.
ರಕ್ತದೊತ್ತಡ ಕಡಿಮೆ ಮಾಡಲು ಬೆಳ್ಳುಳ್ಳಿ ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಬೆಳ್ಳುಳ್ಳಿ ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಉತ್ಪಾದನೆಯನ್ನು ವೇಗಗೊಳಿಸುತ್ತದೆ. ಇದು ರಕ್ತನಾಳಗಳನ್ನು ಸಹ ರಕ್ತವು ಸರಾಗವಾಗಿ ಹರಿಯಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.