Hyundai Creta: ಭರ್ಜರಿ ಸೇಲ್ ಆಗುತ್ತಿರುವ ಹೊಸ ಹುಂಡೈ ಕ್ರೆಟಾದ ವೈಶಿಷ್ಟ್ಯಗಳ ಬಗ್ಗೆ ತಿಳಿಯಿರಿ
ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಹ್ಯುಂಡೈ ಕ್ರೆಟಾ ಕಾರನ್ನು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಸಬಹುದು. ಇದು 11 ಲಕ್ಷದಿಂದ 20.15 ಲಕ್ಷ ರೂ.ವರೆಗೆ(ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಈ SUVಯು E, EX, S, S(O), SX ಟೆಕ್ ಒಳಗೊಂಡಂತೆ 7 ರೂಪಾಂತರ(ವೇರಿಯೆಂಟ್)ಗಳೊಂದಿಗೆ ದೊರೆಯುತ್ತದೆ.
ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ, ರೇಂಜರ್ ಖಾಕಿ ಒಳಗೊಂಡಂತೆ ಹಲವು ಆಕರ್ಷಕ ಬಣ್ಣಗಳಲ್ಲಿ ಲಭ್ಯವಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ದೂರದ ಊರುಗಳಿಗೆ ಪ್ರಯಾಣಿಸಬಹುದು. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಸಹ ಹೊಂದಿದೆ.
ಹ್ಯುಂಡೈ ಕ್ರೆಟಾ SUVಯು 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 PS ಗರಿಷ್ಠ ಶಕ್ತಿ (ಪವರ್) & 144 NM ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಹೊಂದಿದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 PS ಪವರ್ ಹಾಗೂ 253 NM ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 116 PS ಗರಿಷ್ಠ ಶಕ್ತಿ & 250 NM ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, CVT ಹಾಗೂ 7-ಸ್ಪೀಡ್ DCT ಗೇರ್‌ಬಾಕ್ಸ್ ಒಳಗೊಂಡಿದೆ. 17.4 KMPLರಿಂದ 21.8 KMPLವರೆಗೆ ಮೈಲೇಜ್ ನೀಡುತ್ತದೆ.
ಈ ಕಾರು ಯುವ ಗ್ರಾಹಕರನ್ನು ಸೆಳೆಯುವ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.25-ಇಂಚಿನ ಡುಯಲ್ ಡಿಸ್ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್ ಝೋನ್ AC, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.
ಹ್ಯುಂಡೈ ಕ್ರೆಟಾ SUVಯು ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಹಿಲ್ ಸ್ಟಾರ್ಟ್ ಅಸಿಸ್ಟ್‌ಗಳನ್ನು ಹೊಂದಿದೆ.