ICC Player Of The Month ಪ್ರಕಟ, ಜೂನ್ ತಿಂಗಳ ಆಟಗಾರರಾಗಿ ನಿರ್ಣಾಯಕ ಪಾತ್ರ ವಹಿಸಿದ ಇಬ್ಬರು ಇವರೇ!!
ಜೂನ್ ತಿಂಗಳ ಐಸಿಸಿ ಆಟಗಾರರ ಪಟ್ಟಿಯಲ್ಲಿ ವಿಶ್ವಕಪ್ ಪಂದ್ಯದಲ್ಲಿ ನಿರ್ಣಾಯಕ ಪಾತ್ರ ವಹಿಸಿದವರ ಹೆಸರುಗಳು ಆಯ್ಕೆಯಾಗಿವೆ.
ಜಸ್ಪ್ರಿತ್ ಬುಮ್ರಾ ಮತ್ತು ಸ್ಮೃತಿ ಮಂಧಾನ ಭಾರತ ತಂಡ ವಿಶ್ವಕಪ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುವ ಮೂಲಕ ಐಸಿಸಿ ತಿಂಗಳ ಆಟಗಾರರಾಗಿ ಆಯ್ಕೆಯಾಗಿದ್ದಾರೆ.
ಮಂಗಳವಾರ ಜೂನ್ ತಿಂಗಳ ಐಸಿಸಿ ಪುರುಷರ ತಿಂಗಳ ಆಟಗಾರ ಎಂದು ಜಸ್ಪ್ರಿತ್ ಬುಮ್ರಾ ಅವರನ್ನು ಗುರುತಿಸಲಾಯಿತು.
ಮಹಿಳಾ ವಿಭಾಗದಲ್ಲಿ ಉಪ ನಾಯಕಿ ಸ್ಮೃತಿ ಮಂಧಾನ ಮಹಿಳಾ ಆಟಗಾರ್ತಿ ಎಂದು ಗುರುತಿಸಲ್ಪಟ್ಟರು.
ಓಡಿಐ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡದಲ್ಲಿ ಪ್ರಮುಖ ಪಾತ್ರವಹಿಸಿದ ಸ್ಮೃತಿ ಮಂಧಾನ ಮೊದಲ ಐಸಿಸಿ ಮಹಿಳಾ ಆಟಗಾರ್ತಿ ಪ್ರಶಸ್ತಿಯನ್ನು ಪಡೆದರು.