ICC WorldCup 2023: ಒಂಟಿಗಾಲಿನಲ್ಲಿ ಸ್ಫೋಟಕ ಆಟ, ಹಲವು ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್‌ವೆಲ್!

Glenn Maxwell Records in ODI: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಟೂರ್ನಿಯ 39ನೇ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಹಲವಾರು ದಾಖಲೆಗಳನ್ನು ನಿರ್ಮಿಸಿದರು. ​

ನವದೆಹಲಿ: ಅಫ್ಘಾನಿಸ್ತಾನದ ವಿರುದ್ಧ ಸ್ಫೋಟಕ ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಐತಿಹಾಸಿಕ ದ್ವಿಶತಕ ಬಾರಿಸಿದರು. ಬೆನ್ನು ನೋವು ಮತ್ತು ಸ್ನಾಯು ಸೆಳೆತದಿಂದ ಬಳಲುತ್ತಿದ್ದ ಮ್ಯಾಕ್ಸ್‌ವೆಲ್ ಒಂಟಿಗಾಲಿನಲ್ಲಿ ನಿಂತು ಏಕಾಂಗಿ ಹೋರಾಟ ನಡೆಸಿ ತಂಡಕ್ಕೆ ಅವಿಸ್ಮರಣೀಯ ಗೆಲುವು ತಂದುಕೊಟ್ಟರು.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಟೂರ್ನಿಯ 39ನೇ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಹಲವಾರು ದಾಖಲೆಗಳನ್ನು ನಿರ್ಮಿಸಿದರು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 50 ಓವರ್‍ಗಳಲ್ಲಿ 5 ವಿಕೆಟ್ ಕಳೆದುಕೊಂಡು 291 ರನ್ ಗಳಿಸಿತು. 292 ರನ್‍ಗಲ ಗೆಲುವಿನ ಗುರಿ ಬೆನ್ನತ್ತಿದ ಆಸೀಸ್ 91 ರನ್‍ ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿ ಸಿಲುಕಿತ್ತು. ನೋವಿನ ನಡುವೆಯೂ ಏಕಾಂಗಿ ಪ್ರದರ್ಶನ ನೀಡಿದ ಮ್ಯಾಕ್ಸ್ ವೆಲ್ ಸ್ಫೋಟಕ ಆಟವಾಡಿ ತಂಡಕ್ಕೆ ಗೆಲುವು ತಂದುಕೊಡುವುದಲ್ಲದೆ, ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದರು.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಗ್ಲೆನ್ ಮ್ಯಾಕ್ಸ್‌ವೆಲ್ ಐತಿಹಾಸಿಕ ದ್ವಿಶತಕ ಸಿಡಿಸಿದರು. 128 ಎಸೆಗಳಲ್ಲಿ 21 ಬೌಂಡರಿ ಮತ್ತು 10 ಸಿಕ್ಸರ್ ಇದ್ದ ಅಜೇಯ 201 ರನ್ ಗಳಿಸಿದ ಮ್ಯಾಕ್ಸ್ವೆಲ್ ಹೊಸ ದಾಖಲೆ ನಿರ್ಮಿಸಿದರು. ಕ್ರಿಕೆಟ್ ದಿಗ್ಗಜರು ‘ಇದು ಒನ್‌ ಮ್ಯಾನ್ ಶೋ ಅಲ್ಲ, ಒನ್‌ ಲೆಗ್ ಶೋ’ ಎಂದು ಹಾಡಿಹೊಗಳಿದ್ದಾರೆ.

2 /5

ಅಫ್ಘಾನಿಸ್ತಾನದ ವಿರುದ್ಧ ಸ್ಫೋಟಕ ಆಟವಾಡಿದ ಗ್ಲೆನ್ ಮ್ಯಾಕ್ಸ್‌ವೆಲ್ ಏಕದಿನ ಕ್ರಿಕೆಟ್‍ನಲ್ಲಿ ದ್ವಿಶತಕ ಗಳಿಸಿದ ಆಸ್ಟ್ರೇಲಿಯಾದ ಮೊದಲ ಬ್ಯಾಟರ್ ಎನಿಸಿಕೊಂಡರು.

3 /5

ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಚೇಸಿಂಗ್ ವೇಳೆ ದ್ವಿಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಜೊತೆಗೆ 6ನೇ ಕ್ರಮಾಂಕದಲ್ಲಿ ಬಂದು ದ್ವಿಶತಕ ಬಾರಿಸಿದ ದಾಖಲೆ ನಿರ್ಮಿಸಿದರು.

4 /5

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ದ್ವಿಶತಕ ದಾಖಲಿಸಿದ 3ನೇ ಆಟಗಾರನೆಂಬ ಹೆಗ್ಗಳಿಕೆಗೆ ಗ್ಲೆನ್ ಮ್ಯಾಕ್ಸ್‌ವೆಲ್ ಪಾತ್ರರಾದರು.

5 /5

ಗ್ಲೆನ್ ಮ್ಯಾಕ್ಸ್‌ವೆಲ್ ಏಕದಿನ ಕ್ರಿಕೆಟ್‍ನಲ್ಲಿ 2ನೇ ಅತೀವೇಗದ ದ್ವಿಶತಕ ಬಾರಿಸಿದ ದಾಖಲೆ ನಿರ್ಮಿಸಿದರು. ಜೊತೆಗೆ ಏಕದಿನ ವಿಶ್ವಕಪ್‍ನಲ್ಲಿ ಅತಿಹೆಚ್ಚು ಸಿಕ್ಸರ್ ಗಳಿಸಿದ 3ನೇ ಕ್ರಿಕೆಟಿಗನೆಂಬ ಹೆಗ್ಗಳಿಕೆಗೆ ಪಾತ್ರರಾದರು.