ICC WorldCup 2023: ಒಂಟಿಗಾಲಿನಲ್ಲಿ ಸ್ಫೋಟಕ ಆಟ, ಹಲವು ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್‌ವೆಲ್!
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಗ್ಲೆನ್ ಮ್ಯಾಕ್ಸ್‌ವೆಲ್ ಐತಿಹಾಸಿಕ ದ್ವಿಶತಕ ಸಿಡಿಸಿದರು. 128 ಎಸೆಗಳಲ್ಲಿ 21 ಬೌಂಡರಿ ಮತ್ತು 10 ಸಿಕ್ಸರ್ ಇದ್ದ ಅಜೇಯ 201 ರನ್ ಗಳಿಸಿದ ಮ್ಯಾಕ್ಸ್ವೆಲ್ ಹೊಸ ದಾಖಲೆ ನಿರ್ಮಿಸಿದರು. ಕ್ರಿಕೆಟ್ ದಿಗ್ಗಜರು ‘ಇದು ಒನ್ ಮ್ಯಾನ್ ಶೋ ಅಲ್ಲ, ಒನ್ ಲೆಗ್ ಶೋ’ ಎಂದು ಹಾಡಿಹೊಗಳಿದ್ದಾರೆ.
ಅಫ್ಘಾನಿಸ್ತಾನದ ವಿರುದ್ಧ ಸ್ಫೋಟಕ ಆಟವಾಡಿದ ಗ್ಲೆನ್ ಮ್ಯಾಕ್ಸ್‌ವೆಲ್ ಏಕದಿನ ಕ್ರಿಕೆಟ್‍ನಲ್ಲಿ ದ್ವಿಶತಕ ಗಳಿಸಿದ ಆಸ್ಟ್ರೇಲಿಯಾದ ಮೊದಲ ಬ್ಯಾಟರ್ ಎನಿಸಿಕೊಂಡರು.
ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಚೇಸಿಂಗ್ ವೇಳೆ ದ್ವಿಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಜೊತೆಗೆ 6ನೇ ಕ್ರಮಾಂಕದಲ್ಲಿ ಬಂದು ದ್ವಿಶತಕ ಬಾರಿಸಿದ ದಾಖಲೆ ನಿರ್ಮಿಸಿದರು.
ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ದ್ವಿಶತಕ ದಾಖಲಿಸಿದ 3ನೇ ಆಟಗಾರನೆಂಬ ಹೆಗ್ಗಳಿಕೆಗೆ ಗ್ಲೆನ್ ಮ್ಯಾಕ್ಸ್‌ವೆಲ್ ಪಾತ್ರರಾದರು.
ಗ್ಲೆನ್ ಮ್ಯಾಕ್ಸ್‌ವೆಲ್ ಏಕದಿನ ಕ್ರಿಕೆಟ್‍ನಲ್ಲಿ 2ನೇ ಅತೀವೇಗದ ದ್ವಿಶತಕ ಬಾರಿಸಿದ ದಾಖಲೆ ನಿರ್ಮಿಸಿದರು. ಜೊತೆಗೆ ಏಕದಿನ ವಿಶ್ವಕಪ್‍ನಲ್ಲಿ ಅತಿಹೆಚ್ಚು ಸಿಕ್ಸರ್ ಗಳಿಸಿದ 3ನೇ ಕ್ರಿಕೆಟಿಗನೆಂಬ ಹೆಗ್ಗಳಿಕೆಗೆ ಪಾತ್ರರಾದರು.