Diabetes Diet: ಈ ಆಹಾರಗಳನ್ನು ತಿಂದರೆ ಬ್ಲಡ್ ಶುಗರ್ ಹೆಚ್ಚಾಗುವುದೇ ಇಲ್ಲ!
ಡಯಾಬಿಟಿಸ್ ಅಥವಾ ಸಕ್ಕರೆ ಕಾಯಿಲೆ ಬಂದರೆ ಆ ವ್ಯಕ್ತಿ ಜೀವನ ಪರ್ಯಂತ ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಇಲ್ಲದಿದ್ದರೆ, ಬ್ಲಡ್ ಶುಗರ್ ಲೆವೆಲ್ ಹೆಚ್ಚಾಗಿ ಮಾರಣಾಂತಿಕ ಕಾಯಿಲೆಗೂ ಬಲಿಯಾಗಬಹುದು.
ಆಯುರ್ವೇದದ ಪ್ರಕಾರ, ಮಧುಮೇಹಿಗಳು ತಮ್ಮ ದೈನಂದಿನ ಆಹಾರದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ಬಳಸುವುದರಿಂದ ಎಂದಿಗೂ ಬ್ಲಡ್ ಶುಗರ್ ಲೆವೆಲ್ ಹೆಚ್ಚಾಗುವುದಿಲ್ಲ ಎನ್ನಲಾಗುತ್ತದೆ.
ಪಾಲಕ್, ಮೆಂತ್ಯ ಸೇರಿದಂತೆ ತಾಜಾ ಹಸಿರು ಸೊಪ್ಪುಗಳನ್ನು ನಿತ್ಯ ತಿನ್ನುವುದರ್9ಎನ್‌ಡಿಏ ರಕ್ತದಲ್ಲಿನ ಸಕ್ಕರೆ ಮಟ್ಟ ಸದಾ ನಿಯಂತ್ರಣದಲ್ಲಿರುತ್ತದೆ.
ನಿತ್ಯ ಖಾಲಿ ಹೊಟ್ಟೆಯಲ್ಲಿ ದಾಲ್ಚಿನ್ನಿ ನೀರನ್ನು ಕುಡಿಯುವುದರಿಂದ ಇದು ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಿ ಶುಗರ್ ಲೆವೆಲ್ ಅನ್ನು ಕಂಟ್ರೋಲ್ ನಲ್ಲಿಡಲು ಸಹಕಾರಿ ಆಗಲಿದೆ.
ಚಿಯಾ ಸೀಡ್ಸ್ ನಲ್ಲಿ ಫೈಬರ್, ಒಮೆಗಾ 3 ಕೊಬ್ಬಿನಾಮ್ಲಗಳು ಹೇರಳವಾಗಿದ್ದು, ಇದರ ದೈನಂದಿನ ಬಳಕೆಯಿಂದ ಬ್ಲಡ್ ಶುಗರ್ ಲೆವೆಲ್ ಸ್ಥಿರಗೊಳಿಸಲು ಹಾಗೂ ದೇಹದ ತೂಕವನ್ನು ನಿಯಂತ್ರಿಸಲು ತುಂಬಾ ಪ್ರಯೋಜನಕಾರಿ.
ನಿಮ್ಮ ದೈನಂದಿನ ಆಹಾರದಲ್ಲಿ ಬಾರ್ಲಿ, ಓಟ್ಸ್ ನಂತಹ ಹೆಚ್ಚು ಫೈಬರ್ ಯುಕ್ತ ಆಹಾರಗಳನ್ನು ಬಳಸುವುದರಿಂದ ಬ್ಲಡ್ ಶುಗರ್ ಹೆಚ್ಚಾಗುವುದನ್ನು ತಪ್ಪಿಸಬಹುದು.
ನಿತ್ಯ ಸೀಮಿತ ಪ್ರಮಾಣದಲ್ಲಿ ಬಾದಾಮಿ, ವಾಲ್ನಟ್ಸ್, ಪಿಸ್ತಾ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗದಂತೆ ತಡೆಯಬಹುದು.
ಮಂತಿನಲ್ಲಿ ಕಡಿದು ಬೆಣ್ಣೆ ತೆಗೆದ ಮಜ್ಜಿಗೆಗೆ ಸ್ವಲ್ಪವೇ ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಬೆರೆಸಿ ನಿತ್ಯ ಒಂದು ಲೋಟ ಮಜ್ಜಿಗೆ ಕುಡಿಯುವುದರಿಂದ ಮಧುಮೇಹ ಹೆಚ್ಚಾಗುವುದನ್ನು ತಪ್ಪಿಸಬಹುದು.
ಒಂದು ಲೋಟ ನೀರಿಗೆ ಒಂದು ಚಮಚ ಮೆಂತ್ಯ ಹಾಕಿ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುತ್ತಾ ಬಂದರೆ ಶುಗರ್ ಲೆವೆಲ್ ಎಂದಿಗೂ ಹೆಚ್ಚಾಗುವುದಿಲ್ಲ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.